

ಕಾರ್ಕಳ, ಅ.22: ಕಾರ್ಕಳ ತಾಲೂಕಿನ ಬಜಗೋಳಿಯಲ್ಲಿ ಪಾದಚಾರಿ ವ್ಯಕ್ತಿಗೆ ಸ್ಕೂಟಿ ಡಿಕ್ಕಿಯಾದ ಪರಿಣಾಮ ಪಾದಚಾರಿ ಮತ್ತು ಸ್ಕೂಟರ್ ಸವಾರರಿಬ್ಬರು ಗಾಯಗೊಂಡಿದ್ದಾರೆ.
ಅ.21 ರಂದು ಈ ಅಪಘಾತ ನಡೆದಿದ್ದು, ಕಾರ್ಕಳ ಕಡೆಯಿಂದ ಬಜಗೋಳಿ ಕಡೆಗೆ ಹೋಗುತ್ತಿದ್ದ ಹೋಗುತ್ತಿದ್ದ ಎಲೆಕ್ಟ್ರಿಕ್ ಸ್ಕೂಟಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶೀನ ಗೌಡ ಎಂಬವರಿಗೆ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ರಸ್ತೆಗೆ ಬಿದ್ದು ಗಾಯಗೊಂಡ ಶೀನ ಗೌಡ ಅವರಿಗೆ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟರ್ ಸವಾರರಿಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






.
.
.
.
.
.
.
.
.
.
.
.
.
.
.
.
.
.
.
.
