Share this news

ಬೆಂಗಳೂರು,ಅ.24: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಸ್ಟಿಂಗ್ ಆಪರೇಷನ್ ನಡೆಸಿ ಬೆದರಿಸಲು ಷಡ್ಯಂತ್ರ ರೂಪಿಸಲಾಗಿದೆ ಎಂಬ ಆರೋಪವು ರಾಜ್ಯ ಕಾಂಗ್ರೆಸ್‌ನಲ್ಲಿ ಕೋಲಾಹಲವೇ ಸೃಷ್ಟಿಯಾಗಿದೆ. ಇದರಿಂದ ಪಕ್ಷದೊಳಗೆ ಅಂತರಿಕ ಕಚ್ಚಾಟ ಹಾಗೂ ಭಿನ್ನಮತ ಸ್ಪೋಟಗೊಳ್ಳುವ ಸಾಧ್ಯತೆಯನ್ನು ಮನಗಂಡಿರುವ ಕಾಂಗ್ರೆಸ್ ಹೈಕಮಾಂಡ್ ಕೂಡ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಆರೋಪದಲ್ಲಿ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಅವರಿಗೆ ಕೆಪಿಸಿಸಿಯಿಂದ ಶೋಕಾಸ್ ನೋಟೀಸ್ ಜಾರಿಯಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಸೂಚನೆಯಂತೆ ಕೃಪಾ ಆಳ್ವ ಅವರಿಗೆ ನೋಟಿಸ್ ನೀಡಲಾಗಿದೆ. ಈ ವಿಡಿಯೋದಲ್ಲಿ ಕಾಂಗ್ರೆಸ್‌ನ ಮಹಿಳಾ ನಾಯಕಿ ಕೃಪಾ ಆಳ್ವಾ ಕಾಣಿಸಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕೂಡ ಬಹಿರಂಗವಾಗಿ ಆರೋಪಿಸಿದ್ದರು.

ಸಿದ್ದರಾಮಯ್ಯ ಅವರನ್ನು ಬ್ಲ್ಯಾಕ್‌ಮೇಲ್ ಮಾಡುವ ದುರುದ್ದೇಶದಿಂದಲೇ ಈ ಸ್ಟಿಂಗ್ ಆಪರೇಷನ್ ನಡೆಸಲಾಗಿದೆ ಎಂದು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ, ಈ ಕೃತ್ಯದ ಹಿಂದೆ ಸ್ವತಃ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರ ಕೈವಾಡವಿದೆ ಎಂದು ಯತೀಂದ್ರ ಆರೋಪಿಸಿರುವುದು ರಾಜಕೀಯ ವಲಯದಲ್ಲಿ ಕಾಡ್ಗಿಚ್ಚಿನಂತೆ ಹರಡಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ.ಇದಲ್ಲದೇ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವೃ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕಾಂಗ್ರೆಸ್ ಪಕ್ಷ ಮತ್ತೆ ಸಂಕಷ್ಟದ ಸುಳಿಯಲ್ಲಿ ಸಿಲುಕಿದಂತಾಗಿದೆ.

ಯತೀಂದ್ರ  ಸಿದ್ದರಾಮಯ್ಯ ಅವರ ಆರೋಪದ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ರಾಜಕೀಯ ಸೇಡು ತೀರಿಸಿಕೊಳ್ಳಲು ಕೆಲವರು ಮಾಡುವ ಹೀನ ಕೃತ್ಯ ಇದಾಗಿದೆ ಎಂದು ಕಿಡಿಕಾರಿದ್ದಾರೆ. ಇಂತಹ ಘಟನೆಗಳು ನಡೆಯಬಾರದು ಎಂದು ತಾವು ನಿರಂತರವಾಗಿ ಹೇಳಿಕೊಂಡು ಬಂದಿರುವುದಾಗಿ ತಿಳಿಸಿದ ಅವರು, ಈ ಸ್ಟಿಂಗ್ ಆಪರೇಷನ್‌ನಲ್ಲಿ ಕಾಂಗ್ರೆಸ್‌ನವರು ಯಾರಾದರೂ ಭಾಗಿಯಾಗಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ವಿಡಿಯೋದಲ್ಲಿರುವ ಸಂಪೂರ್ಣ ಸತ್ಯಾಸತ್ಯತೆ ಹೊರಬರಲಿದ್ದು, ಈಗಾಗಲೇ ಕೃಪಾ ಆಳ್ವಾ ಅವರಿಗೆ ಶೋಕಾಸ್ ನೋಟಿಸ್ ನೀಡಲು ಸೂಚಿಸಲಾಗಿದೆ ಎಂದು ಬಿ.ಕೆ. ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಪಕ್ಷಕ್ಕೆ ಮುಜುಗರ ಉಂಟುಮಾಡುವ ಮತ್ತು ನಾಯಕರ ವಿರುದ್ಧವೇ ಗೂಢಚರ್ಯೆ ನಡೆಸುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಹೈಕಮಾಂಡ್ ಹಂತದಲ್ಲೂ ಸಿದ್ಧತೆಗಳು ನಡೆದಿವೆ.

 

 

 

 

.

 

.

.

.

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *