Share this news

ಬೆಂಗಳೂರು, ಅ.27: ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಈಶಾನ್ಯ ಕ್ಷೇತ್ರದ ಸ್ಥಾನಗಳಿಗೆ ನಡೆದ ಚುನಾವಣೆಯ ಮತಏಣಿಕೆ ಕಾರ್ಯ ಇಂದು ನಡೆಯಿತು. ಈ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಅಭ್ಯರ್ಥಿಗಳಾದ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ ರಂಗನಾಥ್ ಹಾಗೂ ಈಶಾನ್ಯ ಕ್ಷೇತ್ರದಿಂದ ಶಶೀಲ್ ನಮೋಶಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ತೀವೃ ಮುಖಭಂಗವಾಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ.ರಂಗನಾಥ್ ಗೆಲುವು

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ  ದ್ವೈವಾರ್ಷಿಕ ಚುನಾವಣೆ-2026ರ  ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಅಭ್ಯರ್ಥಿ ಎ.ಪಿ ರಂಗನಾಥ್ ಅವರು ಚುನಾಯಿತರಾಗಿದ್ದಾರೆ.ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನದಲ್ಲಿ ಒಟ್ಟು 27,405 ಮತದಾರರ ಪೈಕಿ 22,468 ಮಂದಿ ಮತ ಚಲಾಯಿಸಿದ್ದು, ಶೇ.81.98ರಷ್ಟು ಮತದಾನವಾಗಿತ್ತು. ಮತ ಚಲಾಯಿಸಿದವರಲ್ಲಿ 8,360 ಪುರುಷರು ಹಾಗೂ 14,108 ಮಹಿಳೆಯರು ಇದ್ದರು.

ಇಂದು ಬೆಳಗ್ಗೆ 8 ಗಂಟೆಯಿAದ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೀದಿಯಲ್ಲಿರುವ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಪ್ರಾರಂಭಗೊAಡಿದ್ದು, ಮೊದಲನೆಯ ಪ್ರಾಶಸ್ಯದ ಮತ ಎಣಿಕೆ ಅಂತ್ಯದಲ್ಲಿ ಎ.ಪಿ. ರಂಗನಾಥ್ ಅವರು 10810  ಮತಗಳನ್ನು  ಪಡೆದು  ಗೆಲುವು ಸಾಧಿಸಿದ್ದಾರೆ. ಮತ ಎಣಿಕೆಯ ವಿವಿಧ ಸುತ್ತುಗಳಲ್ಲಿ ಎ.ಪಿ. ರಂಗನಾಥ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಪುಟ್ಟಣ್ಣನವರಿಂದ 908 ಅಂತರದ ಮುನ್ನಡೆಯನ್ನು ಪಡೆದು ಚುನಾಯಿತರಾಗಿದ್ದಾರೆ. 

ವಿಧಾನ ಪರಿಷತ್ ಚುನಾವಣೆ: ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಎನ್ ಡಿ ಎ ಮೈತ್ರಿ ಅಭ್ಯರ್ಥಿ ಶಶೀಲ್ ನಮೋಶಿಗೆ ಭರ್ಜರಿ ಗೆಲುವು!

ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನಪರಿಷತ್‌ಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಹಾಲಿ ಪರಿಷತ್ ಸದಸ್ಯ ಹಾಗೂ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರು ಅದ್ಭುತ ಜಯ ದಾಖಲಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ್ ವಿರುದ್ಧ ತೀವ್ರ ಸ್ಪರ್ಧೆ ಒಡ್ಡಿದ್ದ ಶಶೀಲ್ ನಮೋಶಿ ಅವರು ಅಂತಿಮವಾಗಿ ಭಾರಿ ಮತಗಳ ಅಂತರದಿAದ ಗೆಲುವಿನ ನಗೆ ಬೀರಿದ್ದಾರೆ.
ಫಲಿತಾಂಶದ ಕುರಿತು ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ಮುಖಂಡ ಹಾಗೂ ಎಂಎಲ್‌ಸಿ ಎನ್. ರವಿಕುಮಾರ್, “ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಶಶೀಲ್ ನಮೋಶಿ ಅತ್ಯಂತ ಪ್ರಭಾವಿ ಗೆಲುವು ಸಾಧಿಸಿದ್ದಾರೆ. ಇತ್ತೀಚೆಗೆ ನಡೆದ ನಾಲ್ಕೂ ವಿಧಾನಪರಿಷತ್ ಕ್ಷೇತ್ರಗಳ ಚುನಾವಣೆಯಲ್ಲಿ ರಾಜ್ಯದ ಪ್ರಜ್ಞಾವಂತ ಶಿಕ್ಷಕರು ಹಾಗೂ ಪದವೀಧರರು ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿದ್ದಾರೆ,” ಎಂದರು. ಈ ನಾಲ್ಕೂ ಪರಿಷತ್ ಚುನಾವಣೆಗಳ ಫಲಿತಾಂಶ ಮುಂಬರುವ 2028ರ ರಾಜ್ಯ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

 

 

.

 

.

.

.

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *