

ಕಾರ್ಕಳ,ಅ.29: ಕಾರ್ಕಳ ತಾಲೂಕಿನ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಟ್ಟಿರುವ ಘಟನೆ ನಡೆದಿದೆ.
ಬಾಗಲಕೋಟೆ ಮೂಲದ ಮೇಘ (18ವ) ಮಿಯ್ಯಾರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಈ ಹಿಂದೆ ಹೃದಯ ಸಂಬAಧಿ ಖಾಯಿಲೆಯಿಂದ ಬಳಲುತ್ತಿದ್ದಳು. ಅದಕ್ಕೆ ಪೋಷಕರು ಚಿಕಿತ್ಸೆಯನ್ನೂ ಕೊಡಿಸಿದ್ದರು. ಆದರೆ ಅ.28 ರಂದು ಶಾಲೆಯಲ್ಲಿದ್ದ ವೇಳೆ ಏಕಾಏಕಿ ಫಿಟ್ಸ್ ಗೆ ಒಳಗಾಗಿ ಕುಸಿದು ಬಿದ್ದಿದ್ದಳು. ಕೂಡಲೇ ಆಕೆಯನ್ನು ಕಾರ್ಕಳ ಸರಕಾರಿ ಸರಕಾರಿ ಆಸ್ಪತ್ರೆಗೆ ಕರೆದೊಯ್ದರೂ ಮೇಘ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





.
.
.
.
.
.
.
.
.
.
.
.
.
.
.
.
.
.
.
.
