

ಬೆಂಗಳೂರು,ಅ.31: ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ನಡೆಸಲಾದ ‘ಸ್ಟಿಂಗ್ ಆಪರೇಷನ್’ (ರಹಸ್ಯ ಕಾರ್ಯಾಚರಣೆ) ಒಂದರಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ಕೃಪಾ ಆಳ್ವ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿ ರಾಜ್ಯ ಕಾಂಗ್ರೆಸ್ ಆದೇಶಿಸಿದೆ.
ಕಳೆದ ಅ. 27 (ಮಂಗಳವಾರ)ದ ದಿನಾಂಕ ನಮೂದಿಸಿ ಹೊರಡಿಸಲಾದ ಆದೇಶದಲ್ಲಿ, “ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪ ಮತ್ತು ಈ ಬಗ್ಗೆ ಕಾರಣ ಕೇಳಿ ಕೃಪಾ ಆಳ್ವಾ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ ಈ ನೋಟಿಸ್ಗೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ, ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ಷಡ್ಯಂತ್ರದ ಭಾಗವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಡೆದಿತ್ತು ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ, ಹಿರಿಯ ನಾಯಕಿ ಕೃಪಾ ಆಳ್ವಾ ಅವರ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಅವರನ್ನು ಕಾಂಗ್ರೆಸ್ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.





.
.
.
.
.
.
.
.
.
.
.
.
.
.
.
.
.
.
.
.
