

ಬೆಂಗಳೂರು, ಅ.31: ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸುಪ್ರೀಂ ಕೋರ್ಟ್ ನಿರ್ದೇಶನಗಳ ಅನ್ವಯ ರಾಜ್ಯದಲ್ಲಿ ನವೆಂಬರ್ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ರಾತ್ರಿ 8 ಗಂಟೆಯಿAದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ವಿಶೇಷವಾಗಿ ಆಸ್ಪತ್ರೆಗಳು, ಶಾಲೆಗಳು ಹಾಗೂ ಪ್ರಮುಖ ಶ್ರದ್ಧಾ ಕೇಂದ್ರಗಳ ಸುತ್ತಮುತ್ತ ಪಟಾಕಿ ನಿಯಮ ಉಲ್ಲಂಘನೆಯಾಗದAತೆ ಕಟ್ಟುನಿಟ್ಟು ವಹಿಸಲು ಸೂಚಿಸಲಾಗಿದೆ. ನಿಗದಿತ ಸಮಯದ ಹೊರತಾಗಿ ಪಟಾಕಿ ಹೊಡೆಯುವುದನ್ನು ನಿಷೇಧಿಸಲಾಗಿದ್ದು, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಈ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.
ರಾಜ್ಯದಲ್ಲಿ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಮತ್ತು ಬಳಸಲು ಅನುಮತಿ ನೀಡಲಾಗಿದೆ. ಗ್ರೀನ್ ಕ್ರಾಕರ್ಸ್ ಬಾಕ್ಸ್ಗಳ ಮೇಲೆ ಕಡ್ಡಾಯವಾಗಿ ಕ್ಯೂಆರ್ ಕೋಡ್ ಇರಬೇಕು. ಈ ಚಿಹ್ನೆ ಇಲ್ಲದ ಪಟಾಕಿಗಳನ್ನು ಮಾರಾಟ ಮಾಡಿದರೆ ಅಥವಾ ಅಕ್ರಮವಾಗಿ ಸಾಗಿಸಿದರೆ ಮುಟ್ಟುಗೋಲು ಹಾಕಿಕೊಳ್ಳುವುದಲ್ಲದೆ, ಸಂಬAಧಪಟ್ಟವರ ವಿರುದ್ಧ ಕ್ರಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ಪರಿಸರ ಸ್ನೇಹಿ ದೀಪಾವಳಿಯನ್ನು ಆಚರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದ್ದು, ಹೆಚ್ಚು ದೀಪಗಳನ್ನು ಬೆಳಗಿ, ಪಟಾಕಿಗಳ ಬಳಕೆಯನ್ನು ಕಡಿಮೆ ಮಾಡುವ ಮೂಲಕ ವೃದ್ಧರು, ಮಕ್ಕಳು ಹಾಗೂ ಮೂಕ ಪ್ರಾಣಿಗಳ ಆರೋಗ್ಯವನ್ನು ಕಾಪಾಡಲು ಸಹಕರಿಸುವಂತೆ ಸರ್ಕಾರ ಕೋರಿದೆ.





.
.
.
.
.
.
.
.
.
.
.
.
.
.
.
.
.
.
.
.
