
ಕಾರ್ಕಳ,ನ.02: ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ವ್ಯಕ್ತಿಯೊಬ್ಬರಿಗೆ ರಾತ್ರಿ ವೇಳೆ ಅಡಿಕೆ ತೋಟದಲ್ಲಿ ವಿಷಕಾರಿ ಹಾವು ಕಚ್ಚಿ ಮೃತಪಟ್ಟಿದ್ದಾರೆ. ಮಹಾಬಲ ಚೌಟ(60) ಎಂಬವರು ನ.1 ರಂದು ರಾತ್ರಿ ವೇಳೆ ಅಡಿಕೆ ತೋಟದಲ್ಲಿ ನೀರು ಹಾಯಿಸುತ್ತಿದ್ದ ವೇಳೆ ವಿಷಕಾರಿ ಹಾವು ಕಚ್ಚಿದೆ. ಈ ಬಗ್ಗೆ ಅವರು ಮನೆಯವರಲ್ಲಿ ತಿಳಿಸಿದ್ದು, ಕೂಡಲೇ ಅವರನ್ನು ಮನೆಯವರು ಕಾರ್ಕಳ ಟಿ.ಎಂ.ಎ ಪೈ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆ ವೇಳೆಗಾಗಲೇ ಮಹಾಬಲ ಚೌಟ ಅವರು ಮೃತಪಟ್ಟಿದ್ದಾರೆ.
ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





.
.
.
.
.
.
.
.
.
.
.
.
.
.
.
.
.
.
.
.
