

ಉಡುಪಿ,ನ.3: ಪೆರ್ಡೂರಿನ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಕಾನೂನು ಬಾಹಿರವಾಗಿ ಯುವತಿಯ ಬಗ್ಗೆ ಅಪಪ್ರಚಾರ ಮಾಡುತ್ತಿದ್ದವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಅಧೀಕ್ಷಕ ಹರಿರಾಂ ಶಂಕರ್ ಎಚ್ಚರಿಕೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬAಧಪಟ್ಟ ಅತ್ಯಾಚಾರ ಸಂತ್ರಸ್ತೆಯ ಖಾಸಗಿ ಫೋಟೋಗಳನ್ನು ಹಾಗೂ ಆಕೆಯ ಗುರುತನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊAಡು ಅಪಪ್ರಚಾರ ಮಾಡುತ್ತಿದ್ದ 150ಕ್ಕೂ ಹೆಚ್ಚು ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಗುಂಪು ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರದೀಪ್ ಪೂಜಾರಿ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸುವ ಬದಲು, ಕೇವಲ ಎನ್ಸಿ ಪ್ರಕರಣ ದಾಖಲಿಸಿಕೊಂಡು ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಹಿರಿಯಡ್ಕ ಎಸ್ಐ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಲಾಗಿದೆ. ಎಸ್ಐ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಪಶ್ಚಿಮ ವಲಯ ಐಜಿಪಿಯವರಿಗೆ ವರದಿ ಸಲ್ಲಿಸಲಾಗಿದ್ದು, ಸಮಗ್ರ ಇಲಾಖಾ ತನಿಖೆ ಎದುರಿಸುತ್ತಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಪ್ರದೀಪ್ ಪೂಜಾರಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ದಾಖಲಾಗಿರುವ ಈ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯಡ್ಕ ಠಾಣೆಯಿಂದ ಮಣಿಪಾಲ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಮಣಿಪಾಲ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ತನಿಖೆ ಪ್ರಗತಿಯಲ್ಲಿದೆ. ಪ್ರದೀಪ್ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಲು ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬAಧಿಸಿದAತೆ ವಿವಿಧ ಸಂಘಟನೆಗಳು ಹಿರಿಯಡ್ಕ ಪೊಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಿದ್ದರಿಂದ ಉಂಟಾದ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಿಸಲು ನವೆಂಬರ್ 3ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 7ರ ವರೆಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ನಿಷೇದಾಜ್ಞೆ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಧರಣಿ, ಸಭೆ, ಮೆರವಣಿಗೆ, ಪ್ರತಿಭಟನೆ ಹಾಗೂ ಮುಷ್ಕರಗಳನ್ನು ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾವುದೇ ರೀತಿಯ ಆಯುಧಗಳು ಅಥವಾ ಮಾರಕಾಸ್ತ್ರಗಳನ್ನು ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ.





.
.
.
.
.
.
.
.
.
.
.
.
.
.
.
.
.
.
.
.
