
ಕಾರ್ಕಳ,ನ.4: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ವಾಜೆ ಇಲ್ಲಿ ಜರಗಿದ 14 ವರ್ಷ ವಯೋಮಾನದೊಳಗಿನ ಕಾರ್ಕಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಎಂಟನೇ ತರಗತಿ ವಿದ್ಯಾರ್ಥಿ ಸನ್ವಿತ್ ಅಪೂರ್ವ ಸಾಧನೆ ಮಾಡಿ ವೈಯಕ್ತಿಕ ಚಾಂಪಿಯನ್ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಕೆಪಿಎಸ್ ಕೊಕ್ಕರ್ಣೆ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ ದ್ವಿತೀಯ, ಚಕ್ರ ಎಸೆತದಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ. ವಿದ್ಯಾರ್ಥಿಯ ಈ ಸಾಧನೆಗೆ ಎಸ್ ಡಿ ಎಮ್ ಸಿ ಅಧ್ಯಕ್ಷರು&ಸದಸ್ಯರು,ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದರು. ವಿದ್ಯಾರ್ಥಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಆಶಾ ಶೆಟ್ಟಿಯವರು ಮಾರ್ಗದರ್ಶನ ನೀಡಿದರು.





.
.
.
.
.
.
.
.
.
.
.
.
.
.
.
.
.
.
.
.
