

ಉಡುಪಿ,ನ4: ಪೆರ್ಡೂರಿನ ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಬುಧವಾರ ತಿಳಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿರುವ ಇಬ್ಬರನ್ನು ಪೊಲೀಸರು ಉಡುಪಿಗೆ ಕರೆ ತರುತ್ತಿದ್ದು, ಇಲ್ಲಿಗೆ ಕರೆತಂದ ಬಳಿಕ ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್ ಸಾಮಿಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದಡಿ ಪೆರ್ಡೂರಿನ ದಿಲೀಪ್ ಕುಮಾರ್ ಅವರು ನೀಡಿದ ದೂರಿನಂತೆ ಹೊರ ರಾಜ್ಯದ ಇಬ್ಬರು ಕಾರ್ಮಿಕರು ಸೇರಿ 10ಕ್ಕೂ ಮಿಕ್ಕಿ ಆರೋಪಿಗಳ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.
ಹಲ್ಲೆ ಮತ್ತು ಬೆದರಿಕೆಗಳಿಂದ ತೀವ್ರ ಮನನೊಂದಿದ್ದ ಪ್ರದೀಪ್ ಪೂಜಾರಿ ಅವರು ಅಕ್ಟೋಬರ್ 30 ರಂದು ಸಂಜೆ ಉಡುಪಿ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.ಪ್ರದೀಪ್ ಅವರ ಸಹೋದರ ದಿಲೀಪ್ ಕುಮಾರ್ ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ 10 ಕ್ಕೂ ಹೆಚ್ಚು ಜನರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ (BNS ಸೆಕ್ಷನ್ 108 ಮತ್ತು 190) ಆರೋಪದಡಿ ಪ್ರಕರಣ ದಾಖಲಾಗಿದೆ.





.
.
.
.
.
.
.
.
.
.
.
.
.
.
.
.
.
.
.
.
