Share this news

ಕಾರ್ಕಳ,ನ.4: ಪೆರ್ಡೂರಿನಲ್ಲಿ ಇತ್ತೀಚಿಗೆ ನಡೆದ ಯುವಕ ಯುವಕ-ಯುವತಿಯ ನಡುವಿನ ಪ್ರೇಮ ದ್ವೇಷಕ್ಕೆ ತಿರುಗಿ ಯುವಕನ ಸಾವಿನಲ್ಲಿ ಅಂತ್ಯಗೊAಡಿರುವುದು ಅತ್ಯಂತ ಆಘಾತಕಾರಿ ವಿಚಾರ. ಸಮಾಜದಲ್ಲಿ ಇಂತಹ ಘಟನೆ ನಡೆದಿರುವುದು ಅತ್ಯಂತ ಬೇಸರದ ಸಂಗತಿ. ಈ ಪ್ರಕರಣದ ಎರಡೂ ಕಡೆಯ ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಅವರ ಕುಟುಂಬಗಳ ನೋವು ಮತ್ತು ದುಃಖದಲ್ಲಿ ನಾವು ಸಮಾನವಾಗಿ ಭಾಗಿಯಾಗುತ್ತೇವೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಹೇಳಿದರು.

ಕಾರ್ಕಳ ಪತ್ರಿಕಾಭವನದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಮೊದಲ ಸಂತ್ರಸ್ತ ಯುವತಿಗೆ ಆದ ಅನ್ಯಾಯಕ್ಕೆ ನ್ಯಾಯ ದೊರೆಯಬೇಕು. ಅದೇ ರೀತಿ ಮೃತಪಟ್ಟ ಪ್ರದೀಪ್ ಪೂಜಾರಿಯ ಸಾವಿಗೂ ನ್ಯಾಯ ಸಿಗಬೇಕು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈಗಾಗಲೇ ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ. ಪ್ರೇಮ ದ್ವೇಷವಾಗಿ ಪರಿವರ್ತನೆಗೊಂಡು ದುರಂತ ಅಂತ್ಯ ಕಾಣಲು ಕಾರಣವಾದ ಅಂಶಗಳನ್ನು ಪೊಲೀಸರು ಸಮಗ್ರವಾಗಿ ತನಿಖೆ ನಡೆಸಿ ಜನರ ಮುಂದಿಡಬೇಕು ಎಂದು ಒತ್ತಾಯಿಸಿದರು.

ಯುವಕ ಮತ್ತು ಯುವತಿ ಎರಡು ಪ್ರಮುಖ ಸಮಾಜಗಳಿಗೆ ಸೇರಿದವರಾಗಿದ್ದು, ಈ ಎರಡೂ ಸಮಾಜಗಳು ಕರಾವಳಿಯ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಗೆ ಮಹತ್ವದ ಕೊಡುಗೆ ನೀಡಿವೆ. ಇಂತಹ ಸಂದರ್ಭದಲ್ಲಿ ಪ್ರಕರಣವನ್ನು ಮುಂದಿಟ್ಟುಕೊAಡು ಎರಡು ಸಮಾಜಗಳ ನಡುವೆ ಸಂಘರ್ಷ ಸೃಷ್ಟಿಸುವ ಪ್ರಯತ್ನಗಳಿಗೆ ಅವಕಾಶ ನೀಡಬಾರದು. ಕೆಲವರು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಸಮಾಜಗಳನ್ನು ಪರಸ್ಪರ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ.ಪ್ರದೀಪ್ ಪೂಜಾರಿ ಮೃತಪಟ್ಟ ತಕ್ಷಣ ಕೆಲವರು ಘಟನೆಯನ್ನು ರಾಜಕೀಯಗೊಳಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡುತ್ತಿರುವುದು ಸರಿಯಲ್ಲ. ಪ್ರದೀಪ್ ವಿರುದ್ಧ ಆರೋಪಗಳು ಕೇಳಿಬಂದಿದ್ದ ಸಂದರ್ಭದಲ್ಲಿ ಅವರನ್ನು ರಾಜಕೀಯವಾಗಿ ಟೀಕಿಸಲಾಗಿತ್ತು. ಆದರೆ ಮೃತಪಟ್ಟ ಬಳಿಕ ಅವರನ್ನು ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ಶುಭದ ರಾವ್ ಆರೋಪಿಸಿದರು.

ಕಾರ್ಕಳದ ತೆಳ್ಳಾರಿನ ದಿನೇಶ್ ಪೂಜಾರಿ ಅವರ ಸಂಶಯಾಸ್ಪದ ಸಾವಿನ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು. ದಿನೇಶ್ ಪೂಜಾರಿ ಅವರು ಶಾಸಕರ ವಿರುದ್ಧ ಗಂಭೀರ ಆರೋಪಗಳನ್ನು ಒಳಗೊಂಡ ಆಡಿಯೋ ಬಿಡುಗಡೆ ಮಾಡಿದ್ದರು. ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಅದೇ ದಿನ ಸಂಜೆ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಪ್ರಕರಣದ ಸತ್ಯಾಸತ್ಯತೆ ಹೊರಬರಲು ನಿಷ್ಪಕ್ಷಪಾತ ತನಿಖೆ ಅಗತ್ಯವಿದೆ. ಆಡಿಯೋ ಹಂಚಿಕೊAಡವರಿಗೆ ಪೊಲೀಸರು ಕರೆ ಮಾಡಿ ಅದನ್ನು ಅಳಿಸುವಂತೆ ಸೂಚಿಸುತ್ತಿರುವುದರ ಹಿಂದಿನ ಕಾರಣವೇನು ಎಂಬುದೂ ಸ್ಪಷ್ಟವಾಗಬೇಕು ಎಂದು ಒತ್ತಾಯಿಸಿದರು. ಪ್ರದೀಪ್ ಪೂಜಾರಿ ಸಾವಿನ ಕುರಿತು ಧ್ವನಿ ಎತ್ತುತ್ತಿರುವ ಶಾಸಕ ವಿ. ಸುನಿಲ್ ಕುಮಾರ್ ಅವರು ದಿನೇಶ್ ಪೂಜಾರಿ ಸಾವಿನ ವಿಚಾರದಲ್ಲಿ ಮೌನ ವಹಿಸಿರುವುದೇಕೆ ಎಂದು ಪ್ರಶ್ನಿಸಿದ ಅವರು, ಎರಡೂ ಪ್ರಕರಣಗಳಲ್ಲಿ ನ್ಯಾಯ ದೊರೆಯಬೇಕು. ರಾಜಕೀಯ ಲಾಭಕ್ಕಾಗಿ ಸಂತ್ರಸ್ತರ ನೋವನ್ನು ಬಳಸಿಕೊಳ್ಳಬಾರದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಕಳ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ ಹಾಗೂ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುದರ್ಶನ್ ಬಂಗೇರ ಉಪಸ್ಥಿತರಿದ್ದರು.

 

.

 

.

.

.

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *