

ಕಾರ್ಕಳ,ನ.5: ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ ಪ್ರತಿಮೆಯನ್ನು ಹೊಸದಾಗಿ ಪುನರ್ ನಿರ್ಮಿಸಲು ಮತ್ತು ಥೀಮ್ ಪಾರ್ಕ್ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಸಂಬAಧ ಬೆಂಗಳೂರಿನ ವಿಕಾಸ ಸೌಧದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ ಜನಪ್ರತಿನಿಧಿಗಳು ಹಾಗೂ ಇಲಾಖಾ ಅಧಿಕಾರಿಗಳ ವಿಶೇಷ ಸಭೆ ನಡೆಸಲಾಗಿದ್ದು, ಯೋಜನೆಯ ಮುಂದಿನ ಹಂತಗಳ ಕುರಿತು ಚರ್ಚಿಸಲಾಗಿದೆ.ಕ ರ್ನಾಟಕ ಹೈಕೋರ್ಟ್ ನೀಡಿದ್ದ ಮಹತ್ವದ ಆದೇಶದ ಹಿನ್ನೆಲೆಯಲ್ಲಿ, ಪ್ರತಿಮೆಯನ್ನು ಹೊಸದಾಗಿ ಹಾಗೂ ಶಾಶ್ವತವಾಗಿ ನಿರ್ಮಿಸಲು ಸರ್ಕಾರ ಮುಂದಾಗಿದೆ.
2023ರ ಜನವರಿಯಲ್ಲಿ ಅಂದಿನ ಸರ್ಕಾರದ ಅವಧಿಯಲ್ಲಿ ಉದ್ಘಾಟನೆಗೊಂಡಿದ್ದ 33 ಅಡಿ ಎತ್ತರದ ಪರಶುರಾಮ ಪ್ರತಿಮೆಯು ಕಂಚಿನ ಬದಲಾಗಿ ಹಿತ್ತಾಳೆ ಬಳಸಿ ಕಳಪೆಯಾಗಿ ನಿರ್ಮಾಣಗೊಂಡಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಸಾರ್ವಜನಿಕ ಸುರಕ್ಷತೆ ಮತ್ತು ವಿನ್ಯಾಸ ದೋಷದ ಕಾರಣಗಳಿಂದಾಗಿ ಈ ಹಿಂದೆಯೇ ಪ್ರತಿಮೆಯ ಮೇಲ್ಭಾಗವನ್ನು ತೆರವುಗೊಳಿಸಲಾಗಿತು. ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿರುವ ಕಾರ್ಕಳ ಕಾಂಗ್ರೆಸ್, ಹೋರಾಟಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದೆ.ಈ ನಿರ್ಧಾರದಿಂದಾಗಿ ಕಳೆದ ಮೂರು ವರ್ಷಗಳಿಂದ ಪ್ರತಿಮೆ ಅಕ್ರಮ ಹಾಗೂ ಮರುಸ್ಥಾಪನೆಗಾಗಿ ನಡೆಯುತ್ತಿದ್ದ ಹೋರಾಟ ಮತ್ತು ಕಾನೂನು ಪ್ರಕ್ರಿಯೆಗಳಿಗೆ ಈಗ ತಾರ್ಕಿಕ ಅಂತ್ಯ ಸಿಗುವ ಲಕ್ಷಣಗಳು ಕಾಣುತ್ತಿವೆ.





.
.
.
.
.
.
.
.
.
.
.
.
.
.
.
.
.
.
.
.
