Share this news

 

ಕಾರ್ಕಳ,ನ.7: ಕನ್ನಡಕ್ಕೆ 2000 ವರ್ಷಗಳ ಇತಿಹಾಸವಿವೆ. ವಿದ್ಯಾಸಂಸ್ಥೆಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುವುದು ಭವಿಷ್ಯದ ಪೀಳಿಗೆಗೆ ಮಾದರಿಯಾಗಿದೆ. ಬದಲಾವಣೆಯ ಕಾಲಘಟ್ಟದಲ್ಲಿ ಕನ್ನಡ ಮಾಧ್ಯಮ ಶಾಲೆಗಳೂ ಅಗತ್ಯಕ್ಕೆ ತಕ್ಕಂತೆ ಆಧುನಿಕ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಪೈಪೋಟಿ ನೀಡುವಂತಾಗಬೇಕು. ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಹೇಳಿದರು.
ಅವರು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಣೂರಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ಶನಿವಾರ ನಡೆದ ಕಾರ್ಕಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಯುವ ಸಮುದಾಯ ಕನ್ನಡ ಪುಸ್ತಕ ಹಾಗೂ ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯ ವಿಚಾರದಲ್ಲಿ ಸರ್ಕಾರದ ನಿಲುವುಗಳನ್ನು ಕನ್ನಡಿಗರು ಸೂಕ್ಷ್ಮವಾಗಿ ಗಮನಿಸಬೇಕಾಗಿದೆ. ಸಾಹಿತ್ಯ ಸಮ್ಮೇಳನಗಳು ಕೇವಲ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಸುವ ಕಾರ್ಯಗಳಿಗೆ ಆದ್ಯತೆ ನೀಡಬೇಕು ಎಂದರು.
ಇದೇ ಸಂದರ್ಭ ನೀಲಾವರ ಸುರೇಂದ್ರ ಅಡಿಗರ ‘ಶಿಕ್ಷಕನೋರ್ವನ ಕಥಾಲೋಕ’, ದೇವದಾಸ್ ಕೆರೆಮನೆ “ಉಯ್ಯಾಲೆ”, ಡಾ. ಸುಮತಿ ಪಿ. ಯವರ “ನೆರಳು ಬೆಳಕಿನ ನಡುವೆ”, ಆರ್. ರಮೇಶ್ ಪ್ರಭು ರವರ “ಮಾನವ ಜನ್ಮ ಸರ್ವ ಶ್ರೇಷ್ಠ” ಪುಸ್ತಕವನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ಬಿಡುಗಡೆಗೊಳಿಸಿದರು.
ಫೆಡರೇಶನ್ ಆಫ್ ಕರ್ನಾಟಕ ರಾಜ್ಯ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‌ನ ಅಧ್ಯಕ್ಷ ಡಾ| ರವೀಂದ್ರ ಶೆಟ್ಟಿ ಬಜಗೋಳಿ “ದಶಪ್ರಭಾ” ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು.

ಸಾಹಿತಿಗಳು ಹಾಗೂ ಯಕ್ಷಗಾನ ಕಲಾವಿದ ಕೋಟೆ ಎಸ್. ರಾಮ ಭಟ್ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ಸಮ್ಮೇಳನ ಅಧ್ಯಕ್ಷ ಸಿದ್ದಾಪುರ ವಾಸುದೇವ ಭಟ್, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಿದರು.
ವೇದಿಕೆಯಲ್ಲಿ ಯಕ್ಷ ಕಲಾರಂಗ ಅಧ್ಯಕ್ಷ ವಿಜಯ ಶೆಟ್ಟಿ, ರಂಗ ಸಂಸ್ಕೃತಿ ಅಧ್ಯಕ್ಷ ಎಸ್. ನಿತ್ಯಾನಂದ ಪೈ, ಸಹಕಾರ ಭಾರತಿ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹ ಕಾಮತ್ ಸಾಣೂರು, ಸಾಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆನುವಂಶಿಕ ಮೊಕ್ತೇಸರ ವೇದಮೂರ್ತಿ ಶ್ರೀರಾಮ್ ಭಟ್, ಉದ್ಯಮಿ ಶ್ರೀಪತಿ ಭಟ್,  ಉಮಾ ಕೃಷ್ಣ ಶೆಟ್ಟಿ, ಮಾಜಿ ಗ್ರಾಮ ಪಂ. ಅಧ್ಯಕ್ಷ ಯುವರಾಜ್ ಜೈನ್,
ಕ.ಸಾ.ಪ. ಉಡುಪಿ ಜಿಲ್ಲಾ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಂದೇ ಮಾತರಂ ಹಾಡಿ, ರಾಜೇಶ್ವರಿ ಪದವಿ ಪೂರ್ವ ಕಾಲೇಜು ಸಾಣೂರಿನ ವಿದ್ಯಾರ್ಥಿಗಳು ನಾಡಗೀತೆ,  ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದ ವಿದ್ಯಾರ್ಥಿಗಳು ರೈತಗೀತೆಯನ್ನು ಹಾಡಿದರು. ರಾಜೇಶ್ವರಿ ಎಜುಕೇಶನ್ ಫೌಂಡೇಶನ್‌ನ ಸ್ಥಾಪಕ ದೇವಿಪ್ರಸಾದ್ ಶೆಟ್ಟಿ ರಾಷ್ಟ್ರ ಧ್ವಜಾರೋಹಣಗೈದರು, ತಾಲೂಕು ಕ.ಸ.ಪ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ ಪರಿಷತ್ ಧ್ವಜಾರೋಹಣಗೈದರು. ಮುಂಬೈನ ಉದ್ಯಮಿ ವೈ.ಕೃಷ್ಣ ಶೆಟ್ಟಿ ಸಮ್ಮೇಳನದ ಮೆರವಣಿಗೆಗೆ ಚಾಲನೆಯನ್ನು ನೀಡಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಸ್ವಾಗತಿಸಿದರು. ಗಣೇಶ್ ಜಾಲ್ಸೂರು ಕಾರ್ಯಕ್ರಮ ನಿರೂಪಿಸಿ, ಸುಧಾಕರ್ ಪೊಸ್ರಾಲು ವಂದಿಸಿದರು

 

.

 

.

.

.

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *