

ಬೆಂಗಳೂರು,ನ.11: ರೇಷನ್ ಕಾರ್ಡ್ ಇ-ಕೆವೈಸಿ ಮಾಡಲು ಈ ಹಿಂದೆ ನಿಗದಿಪಡಿಸಲಾಗಿದ್ದ ದಿನಾಂಕವನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಇ-ಕೆವೈಸಿ ಮಾಡಿಸಲು ನ. 10 ಅಂತಿಮ ದಿನಾಂಕವಾಗಿತ್ತು. ಆದರೆ, ಇನ್ನೂ ಹಲವು ಪಡಿತರದಾರರು ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸದೇ ಇರುವ ಹಿನ್ನಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಈ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಿ ಆದೇಶಿಸಿದೆ. ಹೀಗಾಗಿ ಕೆವೈಸಿ ಮಾಡಿಸುವುದು ಬಾಕಿ ಇರುವವರು ಯಾವುದೇ ಗೊಂದಲವಿಲ್ಲದೆ ನಿಗದಿತ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ.
ಪಡಿತರ ಚೀಟಿ ಹೊಂದಿರುವವರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ಅಥವಾ ಮೊಬೈಲ್ನಲ್ಲಿ ‘ಅನ್ನಸೇವೆ’ ಆ್ಯಪ್ ಬಳಸಿಕೊಂಡು ಸ್ವತಃ ತಾವೇ ಇ-ಕೆವೈಸಿ ಪೂರ್ಣಗೊಳಿಸಲು ಕೂಡ ಅವಕಾಶ ನೀಡಲಾಗಿದೆ. ರೇಷನ್ ಕಾರ್ಡ್ ರದ್ದತಿಯಾಗುವುದನ್ನು ತಪ್ಪಿಸಲು ಮತ್ತು ಸೌಲಭ್ಯಗಳನ್ನು ಪಡೆಯಲು ನವೆಂಬರ್ 30ರ ಒಳಗಾಗಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಆಹಾರ ಇಲಾಖೆ ತಿಳಿಸಿದೆ.


































.
.
.
.
.
.
.
.
.
.
.
.
.
.
.
.
.
.
.
.
