

ಬೆಂಗಳೂರು,ನ.12: ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಬರೋಬ್ಬರಿ 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಉಪಚುನಾವಣೆಗೂ ಮುನ್ನವೇ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಅಧಿಕಾರ ನೀಡುವ ಮೂಲಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.ಸಿಎಂ ಡಿಕೆ ಶಿವಕುಮಾರ್ ಅನುಮೋದನೆ ಬಳಿಕ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಬುಧವಾರ ಅಧಿಕೃತ ಆದೇಶ ಹೊರಡಿಸಿದೆ.
ರಾಜ್ಯದ ವಿವಿಧ ವಿದ್ಯುತ್ ನಿಗಮ, ಸಾರಿಗೆ, ಅಭಿವೃದ್ಧಿ ನಿಗಮಗಳು ಹಾಗೂ ಪ್ರಾಧಿಕಾರ ಸೇರಿದಂತೆ ವಿವಿಧ ಸಂಸ್ಥೆಗಳಿಗೆ ನಿರ್ದೇಶಕರು ಮತ್ತು ಸದಸ್ಯರನ್ನು ನೇಮಕ ಮಾಡಲಾಗಿದೆ. ಅಷ್ಟೇ ಅಲ್ಲದೆ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳಿಗೂ ನೇಮಕ ಮಾಡಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗಿದೆ.ರಾಜ್ಯದ ವಿವಿಧ ಜಿಲ್ಲೆಗಳ ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಒಟ್ಟು 428 ಮಂದಿಯನ್ನು ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.


































.
.
.
.
.
.
.
.
.
.
.
.
.
.
.
.
.
.
.
.
