ಕಾರ್ಕಳ,ನ. 16: ಜವಳಿ ಮತ್ತು ಸಿದ್ದ ಉಡುವು ನೀತಿಯಡಿ ರಾಜ್ಯದಲ್ಲಿ ಜವಳಿ ಉದ್ಯಮಕ್ಕೆ ಸುಮಾರು 20,000 ಕೋಟಿ ರೂ. ಹೂಡಿಕೆ ಮಾಡಲು ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ.ಆದರೆ, ಇಂತಹ ಬೃಹತ್ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯ ಯೋಜನೆಗಳ ನಡುವೆ, ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಈಗಾಗಲೇ ಮಂಜೂರಾಗಿ, ಕಳೆದ ಆರೇಳು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜವಳಿ ಪಾರ್ಕ್ ಯೋಜನೆಯನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಸಾಮಾಜಿಕ ಚಿಂತಕ ಬೆಳ್ಳಿಪ್ಪಾಡಿ ನೇಮಿರಾಜ್ ರೈ ಹೇಳಿದ್ದಾರೆ.
ಈ ಯೋಜನೆಗಾಗಿ ಜಾಗವನ್ನು ಜವಳಿ ಪಾರ್ಕ್ ಹೆಸರಿನಲ್ಲಿ ಜಾಗವನ್ನು ನೋಂದಾಯಿಸಲಾಗಿದೆ. ಅಗತ್ಯ ಭೂಮಿ ಲಭ್ಯವಿರುವಾಗಲೂ ಯೋಜನೆ ಕಾರ್ಯರೂಪಕ್ಕೆ ಬಾರದಿರುವುದಕ್ಕೆ ಕಾರಣವೇನು? ಎಂದು ಪ್ರಶ್ನಿಸಿರುವ ಅವರು ಆಡಳಿತಾತ್ಮಕ ವಿಳಂಬವೇ ಅಥವಾ ಅನುದಾನದ ಕೊರತೆಯೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದಿದ್ದಾರೆ.
ನಿಟ್ಟೆ ಜವಳಿ ಪಾರ್ಕ್ ಯೋಜನೆಗೆ ತಕ್ಷಣ ಮರುಜೀವ ನೀಡಿ,ಬಾಕಿ ಇರುವ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು.
ಅಗತ್ಯ ಅನುದಾನ ಬಿಡುಗಡೆ ಮಾಡಿ ಕಾಮಗಾರಿಗೆ ಕಾಲಮಿತಿ ನಿಗದಿಪಡಿಸಬೇಕು. ಹಾಗೂ ಯುವಜನರಿಗೆ ಮತ್ತು ಮಹಿಳೆಯರಿಗೆ ಆದ್ಯತೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು. ಅಲ್ಲದೇ ರಾಜ್ಯಕ್ಕೆ 20 ಸಾವಿರ ಕೋಟಿ ರೂಪಾಯಿ ಹೂಡಿಕೆ ಬರುವುದರ ಜೊತೆಗೆ, ಈಗಾಗಲೇ ಮಂಜೂರಾಗಿರುವ ಸ್ಥಳೀಯ ಯೋಜನೆಗಳೂ ಸಾಕಾರಗೊಳ್ಳಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
