
ಮಂಗಳೂರು, ನ.17: ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನವೊಂದರಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಸೋಮವಾರ ಸಂಜೆ ಮಂಗಳೂರಿನಿAದ ಬೆಂಗಳೂರಿಗೆ ತೆರಳಬೇಕಿದ್ದ ವಿಮಾನದಲ್ಲಿ ಈ ದುರ್ಘಟನೆ ನಡೆದಿದೆ. ವಿಮಾನ ಟೇಕಾಫ್ಗೆ ಕೆಲವೇ ಕ್ಷಣಗಳು ಬಾಕಿ ಇರುವಾಗ ವಿಮಾನದಲ್ಲಿ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ವಿಮಾನದಲ್ಲಿದ್ದ 229 ಪ್ರಯಾಣಿಕರು, 7 ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
229 ಪ್ರಯಾಣಿಕರು ಮತ್ತು 7 ಮಂದಿ ಸಿಬ್ಬಂದಿ ಇದ್ದ ವಿಮಾನ ಸಂಜೆ 6.10ರ ಸುಮಾರಿಗೆ ಟೇಕಾಫ್ಗೆ ಸಿದ್ಧವಾಗಿತ್ತು. ರನ್ವೇನಲ್ಲಿ ವೇಗವಾಗಿ ಸಾಗುತ್ತಿದ್ದ ವಿಮಾನ ಟೇಕಾಫ್ ಆಗಲು ಸುಮಾರು 100 ಮೀಟರ್ ಅಂತರ ಬಾಕಿ ಇರುವಾಗ ಅದರ ಕೆಳಭಾಗದಲ್ಲಿ ಬೆಂಕಿಯ ಕಿಡಿಯೊಂದಿಗೆ ಸ್ಪಾರ್ಕ್ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಪೈಲಟ್ ತಕ್ಷಣವೇ ವಿಮಾನದ ವೇಗವನ್ನು ಕಡಿಮೆ ಮಾಡಿ ರನ್ವೇನಲ್ಲೇ ನಿಲ್ಲಿಸಿದ್ದಾರೆ. ವಿಮಾನದ ಚಕ್ರವೊಂದರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದಾಗಿ ತಿಳಿದುಬಂದಿದೆ. ಪೈಲಟ್ ಸಕಾಲದಲ್ಲಿ ವಿಮಾನವನ್ನು ನಿಲ್ಲಿಸಿದ್ದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ಟೇಕಾಫ್ನ ಕೊನೆಯ ಕ್ಷಣದಲ್ಲಿ ವಿಮಾನವನ್ನು ನಿಲ್ಲಿಸಿದ ಪೈಲಟ್ನ ಸಮಯಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಮಾನ ಟೇಕಾಫ್ ಆಗಿದ್ದರೆ ಅಪಾಯ ಸಂಭವಿಸುವ ಸಾಧ್ಯತೆಯಿತ್ತು ಎಂದು ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
