Share this news

ಬೆಂಗಳೂರು,ನ.20 : ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂಬುದಾಗಿ ಸುಳ್ಳು ಸಾಕ್ಷ್ಯ ಸೃಷ್ಟಿಸಿದ ಮತ್ತು ತಪ್ಪು ಮಾಹಿತಿ ಹರಡಿದ ಅಪರಾಧಕ್ಕೆ ಸಂಬAಧಿಸಿದAತೆ ದಾಖಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೈಗೊಂಡಿರುವ ತನಿಖೆ ಪ್ರಶ್ನಿಸಿ ಗಿರೀಶ್ ಮಟ್ಟಣ್ಣವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಧರ್ಮಸ್ಥಳ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್, ತಮಗೆ ಎಸ್‌ಐಟಿ ಪೊಲೀಸರು ನೀಡಿರುವ ನೋಟಿಸ್ ಮತ್ತು ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠಲ ಗೌಡ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ಪೀಠ ಆದೇಶಿಸಿದೆ.

ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಸಾವಿರಾರು ಶವಗಳನ್ನು ರಹಸ್ಯವಾಗಿ ಹೂತುಹಾಕಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬ ಗಂಭೀರ ಆರೋಪ ಮಾಡಿ ಹೇಳಿಕೆ ನೀಡಿದ್ದ. ಈ ಹೇಳಿಕೆಯ ಆಧಾರದ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿ ತನಿಖೆಗೆ ಆದೇಶಿಸಿತ್ತು.

ತನಿಖೆ ಆರಂಭಿಸಿದ ಎಸ್‌ಐಟಿ ಅಧಿಕಾರಿಗಳು ಮುಸುಕುಧಾರಿ ನೀಡಿದ್ದ ಮಾಹಿತಿ, ಸ್ಥಳದಲ್ಲಿ ಪತ್ತೆಯಾಗಿದ್ದ ತಲೆಬುರುಡೆ ಹಾಗೂ ಇತರ ಸಾಕ್ಷ್ಯಾಧಾರಗಳ ಮೂಲವನ್ನು ವೈಜ್ಞಾನಿಕವಾಗಿ ಮತ್ತು ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದರು. ವಿಚಾರಣೆ ತೀವ್ರಗೊಂಡAತೆ ಮೂಲ ದೂರುದಾರನಾಗಿದ್ದ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲ ಮತ್ತು ಮಹತ್ವದ ಬದಲಾವಣೆಗಳು ಕಂಡುಬAದಿದ್ದವು. ತನಿಖೆಯ ಬಳಿಕ ನ್ಯಾಯಾಲಯಕ್ಕೆ ವರದಿ ಸಲ್ಲಿಸಿರುವ ಎಸ್‌ಐಟಿ, ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ಹಿಂದೆ ಒಂದು ವ್ಯವಸ್ಥಿತ ಷಡ್ಯಂತ್ರ ಅಡಗಿದೆ ಎಂಬ ಅಂಶವನ್ನು ಬಹಿರಂಗಪಡಿಸಿದ್ದರು.. 

ಪ್ರಕರಣಕ್ಕೆ ಸಂಬAಧಿಸಿದAತೆ ಚಿನ್ನಯ್ಯ ಅಲಿಯಾಸ್ ಚಿನ್ನ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ವಿಠಲ ಗೌಡ ಹಾಗೂ ಸುಜಾತಾ ಭಟ್ ಸೇರಿದಂತೆ ಒಟ್ಟು ಆರು ಮಂದಿಯ ವಿರುದ್ಧ ಸುಳ್ಳು ಸಾಕ್ಷ್ಯಗಳ ಸೃಷ್ಟಿ, ನಕಲಿ ದಾಖಲೆಗಳ ತಯಾರಿಕೆ ಸೇರಿದಂತೆ ಹಲವು ಗಂಭೀರ ಅಪರಾಧ ಕೃತ್ಯಗಳ ಆರೋಪಗಳನ್ನು ಎಸ್‌ಐಟಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದೀಗ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿರುವುದರಿAದ ತನಿಖೆ ಮತ್ತಷ್ಟು ಚುರುಕುಗೊಳ್ಳಲಿದೆ.

 

.

 

.

.

.

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *