

ಬೆಂಗಳೂರು, ನ. 21: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ಐದು ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ತಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ 15 ಸಾವಿರ ರೂಪಾಯಿ ಗೌರವಧನ ನೀಡುವ ಕುರಿತು ಸರ್ಕಾರದ ಆದೇಶದ ಪ್ರತಿ ನೀಡಬೇಕು. ಬೇಡಿಕೆ ಈಡೇರುವವರೆಗೂ ಹೋರಾಟವನ್ನು ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಐದು ದಿನಗಳಿಂದ ಚಳಿ, ಗಾಳಿಯ ನಡುವೆ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ತಮ್ಮ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಸ್ಥಳಕ್ಕೆ ಬಂದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಬಗ್ಗೆ ಮುಖ್ಯಮಂತ್ರಿಗಳಿಗೆ ಕಾಳಜಿ ಇಲ್ಲವೇ ಎಂದು ಪ್ರಶ್ನಿಸಿರುವ ಕಾರ್ಯಕರ್ತೆಯರು, ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವುದಿರಲಿ, ಸೌಜನ್ಯಕ್ಕಾದರೂ ತಮ್ಮ ಕಡೆ ತಿರುಗಿ ನೋಡಿಲ್ಲ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಲ್ಲುಬಂಡೆಯಂತಿರಬಹುದು. ಆದರೆ ನಮ್ಮ ಹೋರಾಟಕ್ಕೆ ಆ ಕಲ್ಲುಬಂಡೆಯನ್ನೂ ಕರಗಿಸುವ ಶಕ್ತಿಯಿದೆ. ನಮ್ಮ ಹೋರಾಟ ಆ ಕಲ್ಲುಬಂಡೆಯನ್ನು ಕೆತ್ತಿ ಮೂರ್ತಿಯನ್ನಾಗಿ ಮಾಡುತ್ತದೆ. ಮುಖ್ಯಮಂತ್ರಿ ನಮ್ಮ ಸಮಸ್ಯೆಗಳನ್ನು ಬಗೆಹರಿಸಿ ಜನರ ಮೆಚ್ಚುಗೆಗೆ ಪಾತ್ರರಾಗಬೇಕು. ಇಲ್ಲವಾದರೆ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
15 ಸಾವಿರ ರೂಪಾಯಿ ಗೌರವಧನ ನೀಡುವಂತೆ ಹಾಗೂ ಇತರ ಕೆಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಬಂಧ ಸರ್ಕಾರದ ಆದೇಶದ ನೀಡಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಳೆದ 4 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
