

ಬೆಂಗಳೂರು, ನ.23: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಮೈ ಕೊರೆಯುವ ಚಳಿ ಮತ್ತು ಗಾಳಿಯನ್ನೂ ಲೆಕ್ಕಿಸದೆ, ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿಯನ್ನು ಮುಂದುವರಿಸಿದ್ದಾರೆ.
ಮುಖ್ಯಮಂತ್ರಿಗಳ ಮನವೊಲಿಕೆ ಮತ್ತು ಆರೋಗ್ಯ ಸಚಿವರ ಸಂಧಾನ ಪ್ರಯತ್ನಗಳಿಂದ ಕೂಡ ಆಶಾ ಕಾರ್ಯಕರ್ತೆಯರ ಪ್ರತಿಭಟನೆಯ ಕಾವನ್ನು ತಗ್ಗಿಲು ಸಾಧ್ಯವಾಗಿಲ್ಲ. ಗೌರವಧನವನ್ನು 15,000ಕ್ಕೆ ಹೆಚ್ಚಿಸಬೇಕು ಹಾಗೂ 5 ಲಕ್ಷ ನಿವೃತ್ತಿ ಪರಿಹಾರ ನೀಡಬೇಕು ಆಗ್ರಹಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಪ್ರತಿ ಕೈ ಸೇರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.
ನವೆಂಬರ್ 17ರಂದು ಆರಂಭಗೊAಡ ಈ ಪ್ರತಿಭಟನೆಯಲ್ಲಿ ರಾಜ್ಯಾದ್ಯಂತ ಸುಮಾರು 45,000ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದಾರೆ. ಒಂದು ಸುತ್ತಿನ ಮಾತುಕತೆ ವಿಫಲವಾಗಿದ್ದು, ಸರ್ಕಾರದಿಂದ ಸ್ಪಷ್ಟ ನಿರ್ಧಾರ ಪ್ರಕಟವಾಗುವವರೆಗೂ ಫ್ರೀಡಂ ಪಾರ್ಕ್ನಿಂದ ತೆರಳುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
