

ಬೆಂಗಳೂರು, ನ.24: ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಜಾರಿಯಾದ ಬಳಿಕ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ನಿಗದಿತ ಆಸನ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಇನ್ಮುಂದೆ ಬಸ್ಗಳಲ್ಲಿ ಆಸನ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾತ್ರಪ್ರಯಾಣಿಕರನ್ನು ಕರೆದೊಯ್ಯಬೇಕು ಎಂದು ಸೂಚನೆ ನೀಡಿದೆ.
ಸಾರಿಗೆ ಇಲಾಖೆಯ ಹೊಸ ಆದೇಶದ ಅನ್ವಯ, ರಾಜ್ಯದಲ್ಲಿ ಸಂಚರಿಸುವ ಎಲ್ಲಾ ಮಾದರಿಯ ಸಾರಿಗೆ ವಾಹನಗಳಲ್ಲಿ ನಿಗದಿತ ಆಸನ ಸಾಮರ್ಥ್ಯಕ್ಕೆ ತಕ್ಕಂತೆ ಮಾತ್ರ ಪ್ರಯಾಣಿಕರಿಗೆ ಪ್ರವೇಶ ನೀಡಬೇಕು. ಈ ಕುರಿತು ರಾಜ್ಯದ ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ಇದರ ಜೊತೆಗೆ ಹೊಸ ನಿಯಮದ ಕುರಿತು ಪ್ರಯಾಣಿಕರಲ್ಲಿ ಅರಿವು ಮೂಡಿಸುವಂತೆ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ನಿಯಮ ಜಾರಿಯಾದರೆ ಬಸ್ಗಳಲ್ಲಿ ಪ್ರಯಾಣಿಸುವ ಪುರುಷರು, ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರಿಗೂ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಇದೀಗ ಇಲಾಖೆಯ ಆದೇಶವನ್ನು ರಾಜ್ಯದ ಸಾರಿಗೆ ನಿಗಮಗಳು ಹೇಗೆ ಕಾರ್ಯಗತಗೊಳಿಸುತ್ತವೆ ಎಂಬುದು ಕುತೂಹಲ ಮೂಡಿಸಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ಸಾರಿಗೆ ನಿಗಮಗಳು ಹೊಸ ನಿಯಮದ ಅನುಷ್ಠಾನಕ್ಕೆ ಯಾವ ಕ್ರಮ ಕೈಗೊಳ್ಳಲಿವೆ ಎಂಬುದನ್ನು ಕಾದು ನೋಡಬೇಕಿದೆ.





.
.
.
.
.
.
.
.
.
.
.
.
.
.
.
.
.
.
.
.
