

ಮಂಗಳೂರು,ನ.24: ಮಂಗಳೂರಿನ ‘ನೈಟ್ ಲೈಫ್’ಗೆ ಕೊನೆಗೂ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈವರೆಗೆ ರಾತ್ರಿ 10 ಗಂಟೆಯಾಗುತ್ತಿದ್ದAತೆ ಬಹುತೇಕ ಸ್ತಬ್ಧವಾಗುತ್ತಿದ್ದ ಮಂಗಳೂರು ನಗರದಲ್ಲಿ, ಇನ್ಮುಂದೆ ರಾತ್ರಿ 11.45ರ ವರೆಗೆ ವ್ಯಾಪಾರ-ವಹಿವಾಟು ನಡೆಸಲು ಮುಕ್ತ ಅವಕಾಶ ನೀಡಲಾಗಿದೆ. ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ವ್ಯಾಪಾರ ವಹಿವಾಟು ನಡೆಸುವಂತಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಮಂಗಳೂರು ರಾತ್ರಿ ಎಂಟು ಗಂಟೆಯ ಬಳಿಕ ಡೆಡ್ ಸಿಟಿಯಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು. ಕರಾವಳಿಯ ಪ್ರವಾಸೋದ್ಯಮ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಮಾತು ಚರ್ಚೆಗೆ ಗ್ರಾಸವಾಗಿತ್ತು. ಮುಖ್ಯಮಂತ್ರಿಗಳ ಹೇಳಿಕೆಯ ಬೆನ್ನಲ್ಲೇ ಬಿಎನ್ಎಸ್ಎಸ್ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ವ್ಯಾಪಾರದ ಅವಧಿಯನ್ನು ವಿಸ್ತರಿಸಿ ಈ ಆದೇಶ ಹೊರಡಿಸಿದ್ದಾರೆ.
ಮಂಗಳೂರು ನಗರದ ಎಲ್ಲಾ ವ್ಯಾಪಾರಿ ಸಂಸ್ಥೆಗಳು, ಅಂಗಡಿಗಳು, ಹೋಟೆಲ್, ರೆಸ್ಟೋರೆಂಟ್, ಟೀ ಸ್ಟಾಲ್ ಹಾಗೂ ಪಾನ್ ಅಂಗಡಿಗಳು ಸೇರಿದಂತೆ ಎಲ್ಲಾ ರೀತಿಯ ವ್ಯಾಪಾರ-ವಹಿವಾಟುಗಳಿಗೆ ರಾತ್ರಿ 11.45ರವರೆಗೆ ಮಾತ್ರ ಮುಕ್ತ ಅವಕಾಶ ನೀಡಲಾಗಿದೆ. ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ವ್ಯಾಪಾರ ವಹಿವಾಟು ನಡೆಸುವಂತಿಲ್ಲ. ಆಸ್ಪತ್ರೆ, ಮೆಡಿಕಲ್ ಶಾಪ್, ತುರ್ತು ಸೇವೆ ಹೊರತುಪಡಿಸಿ ಎಲ್ಲವೂ ಬಂದ್. ಈ ಅವಧಿ ವಿಸ್ತರಣೆ ಆದೇಶವು ಬಾರ್ ಆ್ಯಂಡ್ ರೆಸ್ಟೋರೆಂಟ್ ಹಾಗೂ ವೈನ್ ಶಾಪ್ಗಳಿಗೆ ಅನ್ವಯವಾಗುವುದಿಲ್ಲ (ಅವುಗಳಿಗೆ ಅಬಕಾರಿ ಇಲಾಖೆಯ ನಿಯಮಗಳೇ ಅನ್ವಯವಾಗಲಿವೆ).





.
.
.
.
.
.
.
.
.
.
.
.
.
.
.
.
.
.
.
.
