Share this news

ಕಾರ್ಕಳ,ನ.24: ಕಾರ್ಕಳದ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಅತ್ಯಂತ ಪವಿತ್ರವಾದ ಕಾರ್ಯಕ್ರಮವಾಗಿದೆ.ಈ ಪುಣ್ಯದ ಕಾರ್ಯದಲ್ಲಿ ಭಾಗಿಯಾಗುವ ಅವಕಾಶ ಒದಗಿರುವುದು ನನ್ನ ಸೌಭಾಗ್ಯ.ಈ ಮಹೋತ್ಸವವನ್ನು ರಾಜ್ಯದ ಕಾರ್ಯಕ್ರಮವಾಗಿ ಪರಿಗಣಿಸಿ, ಸರಕಾರದ ವತಿಯಿಂದ ಅಗತ್ಯವಿರುವ ಎಲ್ಲಾ ಸಹಕಾರ ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.

ಅವರು ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿಯ ವತಿಯಿಂದ ಕಾರ್ಕಳದ ದಾನಶಾಲೆಯ ಬಾಹುಬಲಿ ಮಸ್ತಕಾಭಿಷೇಕ ಸಮಿತಿಯ ಕಚೇರಿಯಲ್ಲಿ ನ.24 ರಂದು ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಜೈನ ಧರ್ಮವು ಅಹಿಂಸೆ, ಸಹಿಷ್ಣುತೆ ಮತ್ತು ಸಾಮರಸ್ಯವನ್ನು ಸಾರುವ ಧರ್ಮವಾಗಿದೆ. ಎಲ್ಲರೂ ಒಂದೇ ತಾಯಿಯ ಮಕ್ಕಳಂತೆ ಸಮಾನತೆಯಿಂದ ಬದುಕಬೇಕು ಎಂಬುದು ನಮ್ಮ ಕಾಂಗ್ರೆಸ್ ಪಕ್ಷದ ಸಿದ್ಧಾಂತ. ಜೈನ ಸಮಾಜದ ಏಳಿಗೆಗೆ ಹಾಗೂ ಸಮಾಜದ ಅಭಿವೃದ್ಧಿಗೆ ಸಹಕಾರ ನೀಡಿದ ಮಹನೀಯರನ್ನು ಸ್ಮರಿಸುವ ಕಾರ್ಯವೂ ಈ ಮಹೋತ್ಸವದ ವಿಶೇಷತೆಯಾಗಿದೆ ಎಂದರು.
ಸರಕಾರದ ವತಿಯಿಂದ ಅಗತ್ಯ ಪೂರ್ವಸಿದ್ಧತೆ ಹಾಗೂ ಮೂಲಸೌಕರ್ಯಗಳ ವ್ಯವಸ್ಥೆಗೆ ಆದ್ಯತೆ ನೀಡಲಾಗುವುದು. ಅನುದಾನ ಬಿಡುಗಡೆ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸರಕಾರ ನಿಮ್ಮೊಂದಿಗಿದ್ದು, ಬದ್ಧತೆಯಿಂದ ಮಹೋತ್ಸವವನ್ನು ಯಶಸ್ವಿಗೊಳಿಸೋಣ ಎಂದು ಹೇಳಿದರು.

ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಮಹಾಮಸ್ತಕಾಭಿಷೇಕ ಬಹುವೈಭವದಿಂದ ನಡೆಯುವ ಕಾರ್ಯಕ್ರಮವಾಗಿದ್ದು, ಅದೇ ವೈಭವದೊಂದಿಗೆ ಮುಂದುವರಿಯಬೇಕು. ಮಹೋತ್ಸವಕ್ಕೆ ಅಗತ್ಯವಿರುವ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರಕಾರದ ಅನುದಾನ ಮುಖ್ಯವಾಗಿದೆ. ರಸ್ತೆಗಳ ಅಭಿವೃದ್ಧಿ ಸೇರಿದಂತೆ ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಈ ಮಹೋತ್ಸವ ಅವಕಾಶವಾಗಬೇಕು. ಸರಕಾರದ ಮೇಲೆ ವಿಶ್ವಾಸವಿದೆ ಎಂದರು.

ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಮಾತನಾಡಿ,ಈ‌ ಹಿಂದಿನ ಉತ್ಸವಕ್ಕೆ 10 ಕೋಟಿ ಅನುದಾನ ನೀಡಲಾಗಿತ್ತು. ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಕಾರ್ಕಳಕ್ಕೆ ತುರ್ತಾಗಿ ಅನುದಾನ ಬಿಡುಗಡೆ ಮಾಡುವಂತೆ ಸಚಿವರಲ್ಲಿ ಮನವಿ ಮಾಡಿದರು.

ಮಹೋತ್ಸವದ ಸಿದ್ಧತೆಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಸಮಿತಿಯ ಕಾರ್ಯನಿರ್ವಹಣಾಧಿಕಾರಿ ಮುನಿರಾಜ ರೆಂಜಾಳ, ಅಟ್ಟಳಿಗೆ ನಿರ್ಮಾಣಕ್ಕೆ ಸರಕಾರದಿಂದ ರೂ.1.49 ಕೋಟಿ ಅನುದಾನ ಬಿಡುಗಡೆಯಾಗಿದೆ. ಸುಮಾರು ರೂ.70 ಕೋಟಿ ಅನುದಾನದ ಬೇಡಿಕೆಯನ್ನು ಸರಕಾರದ ಮುಂದಿಡಲಾಗಿದೆ. ಮಹೋತ್ಸವವನ್ನು ಕೇವಲ ಧಾರ್ಮಿಕ ಕಾರ್ಯಕ್ರಮವಾಗಿ ಸೀಮಿತಗೊಳಿಸದೇ, ಕಾರ್ಕಳದ ಅಭಿವೃದ್ಧಿಗೆ ದಿಕ್ಸೂಚಿಯಾಗಬೇಕಿದೆ. ಕಾರ್ಕಳದ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ 595 ವರ್ಷಗಳ ಐತಿಹಾಸಿಕ ಹಿನ್ನೆಲೆಯಿದೆ ಎಂದರು.

ಸಮಿತಿಯ ಉಪಾಧ್ಯಕ್ಷ ಅನಂತರಾಜ ಪೂವಣಿ, ಕೋಶಾಧಿಕಾರಿ ಎ. ಮೋಹನ್ ಪಡಿವಾಳ್, ಸಂಪತ್ ಸಾಮ್ರಾಜ್ಯ ಶಿರ್ತಾಡಿ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಮುಂತಾದವರು ಉಪಸ್ಥಿತರಿದ್ದರು.

 

.

 

.

.

.

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *