ಬೆಂಗಳೂರು,ನ.28: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಳೆದ 12 ದಿನಗಳಿಂದ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಸುಖಾಂತ್ಯಗೊAಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಕಾರ್ಯಕರ್ತೆಯರಿಗೆ ತಿಂಗಳಿಗೆ ರೂ.2,000 ಗೌರವಧನ ಹೆಚ್ಚಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಬೆಳಗ್ಗೆ ಆರೋಗ್ಯ ಸಚಿವ ಯುಟಿ ಖಾದರ್ ಸಹ ಆಶಾ ಕಾರ್ಯಕರ್ತೆಯರ ಜೊತೆ ಸಭೆ ಮಾಡಿದ್ದು, 2000 ರೂಪಾಯಿ ಹೆಚ್ಚಳ ಮಾಡುತ್ತೇವೆ ಪ್ರತಿಭಟನೆ ಕೈಬಿಡಿ ಎಂದು ಮನವಿ ಮಾಡಿದ್ದರು. ಆದರೆ ಅದಕ್ಕೆ ಆಶಾ ಕಾರ್ಯಕರ್ತೆಯರು ಒಪ್ಪಿರಲಿಲ್ಲ. ಈಗ ಅಂತಿಮವಾಗಿ ಸಿಎಂ ಡಿಕೆ ಶಿವಕುಮಾರ್ ಮಾತಿಗೆ ಆಶಾ ಕಾರ್ಯಕರ್ತೆಯರು 2000 ರೂಪಾಯಿಗೆ ಒಪ್ಪಿಕೊಂಡಿದ್ದಾರೆ. ಸದ್ಯ ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಒಟ್ಟು 8 ಸಾವಿರ ರೂಪಾಯಿ ವೇತನ ಲಭಿಸುತ್ತಿದೆ. ಇದೀಗ 2 ಸಾವಿರ ರೂಪಾಯಿ ಹೆಚ್ಚಳದೊಂದಿಗೆ 10 ಸಾವಿರ ರೂಪಾಯಿ ವೇತನ ದೊರೆಯಲಿದೆ. 2027ರ ಜನವರಿಯಿಂದಲೇ ಪರಿಷ್ಕೃತ ವೇತನ ಜಾರಿಗೆ ಬರಲಿದೆ.
ಇನ್ನು ಸಭೆ ಬಳಿಕ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮೀ ಪ್ರತಿಕ್ರಿಯಿಸಿದ್ದು, ಆಶಾ ಕಾರ್ಯಕರ್ತೆಯರಿಗೆ 2 ಸಾವಿರ ಕೊಡಲು ಸರ್ಕಾರ ಒಪ್ಪಿದೆ. ಜನವರಿಯಿಂದಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇವೆ. ಬಜೆಟ್ ನಲ್ಲೂ ಘೋಷಣೆ ಮಾಡುವುದಾಗಿ ಸಿಎಂ ಹೇಳಿದ್ದಾರೆ ಎಂದರು.
ತಿAಗಳಿಗೆ ಕನಿಷ್ಠ 15,000 ನಿಗದಿತ ಗೌರವಧನ, ಬಾಕಿ ಇರುವ ಪ್ರೋತ್ಸಾಹಧನ ಬಿಡುಗಡೆ, ನಿವೃತ್ತಿ ಸೌಲಭ್ಯ ಹಾಗೂ ಉದ್ಯೋಗ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊAಡು ‘ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ’ದ ನೇತೃತ್ವದಲ್ಲಿ ನವೆಂಬರ್ 17ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿತ್ತು. ಚಳಿ, ಮಳೆಯನ್ನೂ ಲೆಕ್ಕಿಸದೆ ಸಾವಿರಾರು ಕಾರ್ಯಕರ್ತೆಯರು ಮಕ್ಕಳೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.