Share this news

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್‌. ಅವರು 20 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಹೆಬ್ರಿ ಮುದ್ರಾಡಿಯ ಅಶ್ವತ್ಥ್ (22) ಶಿಕ್ಷೆಗೊಳಗಾದ ಆರೋಪಿ. ಇನ್‌ಸ್ಟಾಗ್ರಾಂ ಮೂಲಕ ಬಾಲಕಿಯ ಸ್ನೇಹ ಬೆಳೆಸಿದ ಅಶ್ವತ್ಥ್ ಆಕೆಯನ್ನು ಭೇಟಿಯಾಗುವಂತೆ ಪುಸಲಾಯಿಸಿ 2023ರ ಮಾರ್ಚ್‌ನಲ್ಲಿ ಮೂಲ್ಕಿ ಬಸ್‌ ನಿಲ್ದಾಣದಿಂದ ಒತ್ತಾಯಪೂರ್ವಕವಾಗಿ ಬೈಕ್‌ನಲ್ಲಿ ಮಣಿಪಾಲದ ಲಾಡ್ಜ್ ಗೆ ಕರೆದುಕೊಡು ಹೋಗಿ ಅಲ್ಲಿ ಅತ್ಯಾಚಾರವೆಸಗಿದ್ದ. ಕೃತ್ಯವನ್ನು ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳ ಮೂಲಕ ಇತರರಿಗೆ ರವಾನಿಸಿದ್ದ. ಆ ವೀಡಿಯೋ ಬಾಲಕಿಯ ತಂದೆಗೂ ಬಂದಿತ್ತು. ಅದರಂತೆ ತಂದೆ ಮೂಲ್ಕಿ ಠಾಣೆಗೆ ದೂರು ನೀಡಿದ್ದರು.

ಮೂಲ್ಕಿ ಪೊಲೀಸ್‌ ನಿರೀಕ್ಷಕ ವಿದ್ಯಾಧರ್‌ ಡಿ. ಬಾಯ್ಕೆರಿಕರ್‌ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಒಟ್ಟು 24 ಸಾಕ್ಷಿದಾರರನ್ನು ವಿಚಾರಿಸಿ 49 ದಾಖಲೆಗಳನ್ನು ಗುರುತಿಸಲಾಗಿತ್ತು.

ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಆರೋಪಿಯ ವಿರುದ್ಧದ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ಜ. 17ರಂದು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. 4 ಲಕ್ಷ ರೂ. ಪರಿಹಾರ ಸಂತ್ರಸ್ತರ ಪರಿಹಾರ ಯೋಜನೆ ಯಡಿಯಲ್ಲಿ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 4 ಲ.ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನೀಡು ವಂತೆಯೂ ತೀರ್ಪಿನಲ್ಲಿ ತಿಳಿಸಿದ್ದಾರೆ. ಸರಕಾರದ ಪರ ಸ್ಪೆಷಲ್‌ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಕೆ. ಬದರಿನಾಥ ನಾಯರಿ ಅವರು ವಿಚಾರಣೆ ನಡೆಸಿ ವಾದ ಮಂಡಿಸಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *