Share this news

ಬೆಂಗಳೂರು: ಹೊಳೆನರಸೀಪುರ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ. 

ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿಯನ್ನು ಇತ್ತೀಚೆಗೆ ಮುಂದೂಡಲಾಗಿತ್ತು. ಇಂದು ಅರ್ಜಿಯ ವಿಚಾರಣೆಯನ್ನು ಮತ್ತೆ ಸೆಪ್ಟೆಂಬರ್ 19 ಕ್ಕೆ ಮುಂದೂಡಿದೆ. ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.‌ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೆ.19ರ ವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದ್ದಾರೆ.ಹೆಚ್​ಡಿ ರೇವಣ್ಣ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಕಲಂ 354A, 354D ಅಡಿ ಹಳೆಯ ದೂರುಗಳಿಗೆ ಎಫ್ಐಆರ್ ದಾಖಲಿಸುವಂತಿಲ್ಲ. 4 ವರ್ಷಗಳ ಹಿಂದಿನ ದೂರಿಗೆ ಈಗ ಎಫ್ಐಆರ್ ದಾಖಲಿಸಿದ್ದಾರೆ. ಐಪಿಸಿ 506, 509 ಸೆಕ್ಷನ್ ದೂರಿನಲ್ಲಿರುವ ಅಂಶಗಳಿಗೆ ಅನ್ವಯವಾಗುವುದಿಲ್ಲ. ಹೀಗಾಗಿ ಎಫ್ಐಆರ್ ರದ್ದುಪಡಿಸುವಂತೆ ಮನವಿ ಮಾಡಿದರು.

ಸರ್ಕಾರದ ಪರ ವಾದಿಸಿದ ಎಸ್​ಪಿಪಿ ರವಿವರ್ಮ ಕುಮಾರ್, ಈಗಾಗಲೇ ಆರೋಪಪಟ್ಟಿ ದಾಖಲಿಸಿರುವುದಾಗಿ ಮಾಹಿತಿ ನೀಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾ.ಎಂ.‌ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೆಪ್ಟೆಂಬರ್​ 19ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದರು.

 

                        

                          

                        

                          

 

`

                        

                          

                        

                          

 

`

Leave a Reply

Your email address will not be published. Required fields are marked *