Share this news

 ವಿಟ್ಲ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಯ ಅಂಗಡಿಗೆ ಬೆಂಕಿ ಹಚ್ಚಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ.

ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅಂಗಡಿ ಮಾಲೀಕ 40 ವರ್ಷ ಪ್ರಾಯದ ಅಶ್ರಫ್ ಎಂಬಾತ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೇವಲ ಒಂದೇ ವಾರದಲ್ಲಿ ಆರೋಪಿಗೆ ಜಾಮೀನು ಕೂಡ ಮಂಜೂರಾಗಿತ್ತು.

ಆರೋಪಿಯು ಅಂಗಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ದೌರ್ಜನ್ಯ ನಡೆಸಿರುವುದರಿಂದ ಆ ಅಂಗಡಿಯ ವ್ಯಾಪಾರ ಪರವಾನಗಿಯನ್ನು ರದ್ದುಗೊಳಿಸುವಂತೆ ಸಾರ್ವಜನಿಕರು ಗ್ರಾ. ಪಂಗೆ ಮನವಿ ನೀಡಿದ್ದರು.

ಇದೀಗ ಆರೋಪಿ ಅಶ್ರಫ್ ನ ಅಂಗಡಿಗೆ ಯಾರೋ ಅಪರಿಚಿತರು ನಿನ್ನೆ ತಡರಾತ್ರಿ ಬೆಂಕಿ ಹಚ್ಚಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

                       in 

Leave a Reply

Your email address will not be published. Required fields are marked *