ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿರುವುದು ಪತ್ತೆಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು, Anupam Agarwal Ips ಈ ನಕಲಿ ಖಾತೆಯಿಂದ ಬರುವ ಫ್ರೆಂಡ್ಸ್ ಮನವಿ ಸ್ವೀಕರಿಸದಂತೆ ಸೂಚನೆ ನೀಡಿದ್ದಾರೆ.
Anupam Agarwal Ips ಎನ್ನುವ ನಕಲಿ ಖಾತೆ ಸೃಷ್ಟಿ ಮಾಡಿದವರ ವಿರುದ್ಧ ಪ್ರಕರಣ ದಾಖಲು ಮಾಡುವುದಾಗಿ ಅವರು ತಿಳಿಸಿದ್ದಾರೆ.