Share this news

ಕಾರ್ಕಳ: ಬೈಲೂರು ಕಾರ್ಕಳ ಹೆದ್ದಾರಿಯ ಜಾರ್ಕಳ ಕಲ್ಲಮುದೇಲ್ ಎಂಬಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಬೃಹತ್ ಗಾತ್ರದ ಆಲದ ಮರವೊಂದು ರಸ್ತೆಗೆ ಉರುಳಿಬಿದ್ದಿದೆ.
ಭಾನುವಾರ ಮಧ್ಯಾಹ್ನ 1 ಗಂಟೆ ವೇಳೆಗೆ ಮರ ಉರುಳಿಬಿದ್ದಿದ್ದು,
ಈ ಮಾರ್ಗದಲ್ಲಿ ವಾಹನಗಳು ನಿರಂತರವಾಗಿ ಓಡಾಡುತ್ತಿದ್ದು, ಮರ ಬಿದ್ದ ಸಂದರ್ಭದಲ್ಲಿ ಯಾವುದೇ ವಾಹನ ಓಡಾಡವಿಲ್ಲದ ಹಿನ್ನಲೆಯಲ್ಲಿ ಭಾರೀ ದುರಂತ ತಪ್ಪಿದಂತಾಗಿದೆ.
ಈಗಾಗಲೇ ಮರ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು,ಸಧ್ಯ ರಸ್ತೆ ಸಂಪರ್ಕ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

 

 

 

                        

                          

 

 

 

 

 

                        

                          

 

Leave a Reply

Your email address will not be published. Required fields are marked *