ಹೆಬ್ರಿ : ಆಗುಂಬೆ ಘಾಟಿಯ ಚೆಕ್ ಪೋಸ್ಟ್ ಬಳಿ ಭಾರಿ ಮಳೆಗೆ ಮಂಗಳವಾರ ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿಬಿದ್ದ ಪರಿಣಾಮ ಸುಮಾರು ಒಂದು ಗಂಟೆ ಕಾಲ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಆಗುಂಬೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಗುಂಬೆ ಪೊಲೀಸ್ ಠಾಣೆಯ ಪಿಎಸ್ಐ ಶಿವನಗೌಡ ಸ್ಥಳಕ್ಕೆ ಆಗಮಿಸಿ ಜೆಸಿಬಿ ಮೂಲಕ ಮರ ತೆರವುಗೊಳಿಸಿದರು. ಮರ ಬಿದ್ದ ಪರಿಣಾಮ ಸುಮಾರು ಎರಡು ಕಿಲೊಮಿಟರ್ ದೂರದ ವರೆಗೆ ಎರಡು ಬದಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.