Share this news

ಕಾರ್ಕಳ: ಕಳೆದ 15 ವರ್ಷಗಳಿಂದ ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಕ್ಕುAದೂರಿನ ಅರ್ಮುಗಂ (59) ಆತ್ಮಹತ್ಯೆ ಮಾಡಿಕೊಂಡವರು. ಅವರು 15 ವರ್ಷಗಳಿಂದ ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗಿರಲಿಲ್ಲ. ಇದೇ ಕಾರಣಕ್ಕೆ ಮನನೊಂದು ಶನಿವಾರ ಮನೆಯ ಮಾಡಿನ ಕಬ್ಬಿಣದ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *