Share this news

ಕಾರ್ಕಳ: ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಶೂನ್ಯ ಅಭಿವೃದ್ಧಿಯೇ ಸಾಧನೆಯಾಗಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಇದು 60% ಕಮಿಷನ್ ಸರ್ಕಾರವಾಗಿದೆ. ಕಳೆದ ಎರಡು ವರ್ಷಗಳಲ್ಲಿ ಕರಾವಳಿಯ ಮೂರು ಜಿಲ್ಲೆಗಳಿಗೆ ನಯಾಪೈಸೆ ಅನುದಾನ ನೀಡದ ಕಾಂಗ್ರೆಸ್ ಕರಾವಳಿಯ ಅಭಿವೃದ್ಧಿ ವಿರೋಧಿ ಸರ್ಕಾರವಾಗಿದೆ.ಈ ಸರ್ಕಾರವನ್ನು ಕಿತ್ತೊಗೆಯುವ ನಿಟ್ಟಿನಲ್ಲಿ ರಾಜ್ಯವ್ಯಾಪಿ ಆಂದೋಲನ ನಡೆಸಲಾಗುತ್ತದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸುನಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಅವರು ಫೆ.06ರಂದು ಗುರುವಾರ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಕಾರ್ಕಳ ಬಿಜೆಪಿ ವತಿಯಿಂದ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಕಳೆದ 2004ರಿಂದ ಶಾಸಕನಾಗಿ ಆಯ್ಕೆಯಾಗಿ ವಿಧಾನಸಭೆಗೆ ಹೋಗುತ್ತಿದ್ದು, ಈವರೆಗೂ ಇಂತಹ ದರಿದ್ರ ಸರ್ಕಾರ ಕಂಡಿರಲಿಲ್ಲ. ಎರಡು ವರ್ಷದಲ್ಲಿ ಮಂಗಳೂರು, ಉಡುಪಿ ಉತ್ತರ ಕನ್ನಡ ಈ ಮೂರು ಜಿಲ್ಲೆಗಳಿಗೆ ನಯಾಪೈಸೆ ಅನುದಾನ ಕೊಡದೇ ನಿರ್ಲಕ್ಷ್ಯ ಮಾಡಿದ್ದು, 2023 24 ರಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಎಂ ನೇತೃತ್ವದ ಸಭೆಯಲ್ಲಿ ಕೈಗೊಂಡ ಯೋಜನೆಗಳಿಗೆ ಅನುದಾನವೇ ಕೊಟ್ಟಿಲ್ಲ. ಏಕವಿನ್ಯಾಸ ಹಾಗೂ 9/11 ಪಡೆಯಲು ದೂರದ ಕಾಪು ಪ್ರಾಧಿಕಾರಕ್ಕೆ ಹೋಗಬೇಕು.ಈಗಾಗಲೇ 600 ಅರ್ಜಿ ಬಾಕಿಯಿದ್ದು ಮನೆಕಟ್ಟುವವರ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

ಕೇವಲ ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಗ್ಯಾರಂಟಿ ಗಳನ್ನು ಘೋಷಿಸಿದ ನೀವು ಮಹಿಳೆಯರಿಗೆ ನೀಡುತ್ತಿರುವ
ಗೃಹ ಲಕ್ಷ್ಮೀಯನ್ನು ಚುನಾವಣೆ ಲಕ್ಷ್ಮೀಯನ್ನಾಗಿ ಮಾಡುತ್ತಿರುವ ನೀವು ಒಂದು ಮನೆಗೆ 2 ಸಾವಿರ ಕೊಟ್ಟು,ಬಸ್ ದರ ಹೆಚ್ಚಳ,ಮದ್ಯದ ದರ ಏರಿಕೆ,ಪೆಟ್ರೋಲ್, ಡೀಸೆಲ್‌ ಬೆಲೆ, ಹಾಲಿನ ದರ ಹೆಚ್ಚಿಸಿ ಅದೇ ಮನೆಯಿಂದ 6 ಸಾವಿರ ರೂ ದೋಚುತ್ತಿದ್ದೀರಿ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ಉಡುಪಿ ಜಿಲ್ಲೆಯಲ್ಲಿ 32 ಸಾವಿರ ಹಾಗೂ ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡ್ ರದ್ದಾಗಿದ್ದು,ಬಡವರಿಗೆ ಆಸ್ಪತ್ರೆಗಳಲ್ಲಿ ಸರಿಯಾದ ಆರೋಗ್ಯ ಸೇವೆ ಸಿಗುತ್ತಿಲ್ಲ, ರಾಜ್ಯದ 12.50 ಲಕ್ಷ ಬಗರ್ ಹುಕುಂ ಅರ್ಜಿಗಳನ್ನು ಶಾಸಕರ ಅಧ್ಯಕ್ಷತೆ ಸಮಿತಿಯ ಮುಂದೆ ಇಡದೇ ನೇರವಾಗಿ ತಹಶಿಲ್ದಾರ್ ಮೂಲಕ ತಿರಸ್ಕರಿಸಲಾಗಿದೆ,ಈ ಪೈಕಿ ತಾಲೂಕಿನ 3540 ಅರ್ಜಿ ತಿರಸ್ಕಾರವಾಗಿದೆ, ಇದು ದಂಡ ಸರ್ಕಾರ ಹಾಗೂ ಬಡವರ,ಜನಸಾಮಾನ್ಯರ ಕಾಳಜಿಯಿಲ್ಲದ ಭಂಡ ಸರ್ಕಾರ ಎಂದು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸರ್ಕಾರಿ ಕಚೇರಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬ್ರೋಕರ್ ಕೆಲಸ ಮಾಡುತ್ತಿದ್ದಾರೆ,ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾ ನಿಧಿ,ರೈತರಿಗೆ ನೀಡುತ್ತಿದ್ದ ಕೃಷಿ ಸಮ್ಮಾನ್ ಯೋಜನೆ ರದ್ದುಗೊಳಿಸಿದ್ದೇ ಕಾಂಗ್ರೆಸ್ ಸಾಧನೆಯಾಗಿದೆ.ಮಾತ್ರವಲ್ಲದೇ ಗಣಪತಿ ಮೂರ್ತಿಯನ್ನು ಅರೆಸ್ಟ್ ಮಾಡಿದ ಸರ್ಕಾರ, ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿದವರು ಬ್ರದರ್ಸ್, ಹಸುವಿನ ಕೆಚ್ಚಲು ಕತ್ತರಿಸಿದವನು ಮಾನಸಿಕ ಅಸ್ವಸ್ಥ ,ಬಾಣಂತಿಯರ ಸಾವಿನ ಕುರಿತು ಕನಿಕರ ಇಲ್ಲದ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಗುರಿ.ಈ ನಿಟ್ಟಿನಲ್ಲಿ
ಈ ಪ್ರತಿಭಟನೆಯನ್ನು ರಾಜ್ಯ ವ್ಯಾಪಿ ವಿಸ್ತರಣೆ ಮಾಡಲಾಗುವುದು ಎಂದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಮಾತನಾಡಿ, ಜನ ಸಾಮಾನ್ಯರು ಕಟ್ಟಿದ ತೆರಿಗೆ ಹಣ ಸಂಗ್ರಹಿಸಿದ ಹಣದಿಂದ ಅಭಿವೃದ್ಧಿಗೆ ಯಾಕೆ ಅನುದಾನ ನೀಡುತ್ತಿಲ್ಲ? ಗ್ರಾಮ ಪಂಚಾಯತಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ವರ್ಷಕ್ಕೆ ಪ್ರತೀ ಗ್ರಾಮಕ್ಕೆ 12 ಕೋಟಿ ಅನುದಾನ ನೀಡಿದ್ದೇವೆ. ಆದರೆ ಎರಡು ವರ್ಷದಲ್ಲಿ ಇಡೀ ಕಾರ್ಕಳ ಕ್ಷೇತ್ರಕ್ಕೆ ಕೇವಲ 13 ಕೋಟಿ ಅನುದಾನ ನೀಡಿ ಶಾಸಕರಿಗೆ ಕಪಾಳಮೋಕ್ಷ ಮಾಡಬೇಕು ಎಂದ ಕಾರ್ಕಳ ಬ್ಲಾಕ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ನಾಚಿಕೆಯಾಗಬೇಕು ಎಂದರು.
ಕಾರ್ಕಳದಲ್ಲಿ ಕಾಂಗ್ರೆಸ್ ನಿಂದ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆ ಕುರಿತು ತಡೆ ನೀಡಲಾಗಿದೆ. ಪರಶುರಾಮನ ಮೂರ್ತಿಯನ್ನು ಪೊಲೀಸ್ ಠಾಣೆಯಲ್ಲಿ ಕೂಡಿ ಹಾಕಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ನಯಾಪೈಸೆ ಅನುದಾನ ನೀಡಿಲ್ಲ ಇದು ನಿಮ್ಮ ಹಿಂದೂ ವಿರೋಧಿ ನೀತಿಗೆ ಸ್ಪಷ್ಟ ಉದಾಹರಣೆ ಎಂದರು.

ಮಣಿರಾಜ ಶೆಟ್ಟಿ ಮಾತನಾಡಿ,ರಾಜ್ಯದ ಜನ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇರಿಸಿ ಚುನಾಯಿಸಿದ್ದರು. ಇದೀಗ ಕಾಂಗ್ರೆಸ್ ಸರ್ಕಾರದ ಮೇಲಿನ ನಂಬಿಕೆ ಕುಸಿದುಬಿದ್ದಿದೆ
ಸರ್ಕಾರ ಬಂದು 2 ವರ್ಷಗಳಲ್ಲಿ ಇಡೀ ಕ್ಷೇತ್ರಕ್ಕೆ ಕೇವಲ 12 ಕೋಟಿ ಅನುದಾನ ನೀಡಿದೆ. ಬಾಣಂತಿಯರ ಸರಣಿ ಸಾವು, ಆರೋಗ್ಯ ಸೇವೆ ಸಿಗುತ್ತಿಲ್ಲ,ರೈತರ ಅಕ್ರಮ ಸಕ್ರಮ ಅರ್ಜಿ ತಿರಸ್ಕಾರ, ಹೈನುಗಾರಿಕೆ ಸಬ್ಸಿಡಿ ನೀಡುತ್ತಿಲ್ಲ‌ ಇದರಿಂದ ಬಡ ಹೈನುಗಾರರು ಸಂಕಷ್ಟದಲ್ಲಿದ್ದಾರೆ ಎಂದರು.

ಸತೀಶ್ ಶೆಟ್ಟಿ ಮುಟ್ಲುಪಾಡಿ ಮಾತನಾಡಿ,ಸರ್ಕಾರದ ಬಳಿ ಗೃಹ ಲಕ್ಷ್ಮೀ ಯೋಜನೆಗೆ ನೀಡಲು ಹಣವಿಲ್ಲ ಆದರೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷನಿಗೆ 25 ಸಾವಿರ ವೇತನ ನೀಡುತ್ತಿದೆ ಈ ಮೂಲಕ ಮಹಿಳೆಯರ ಗೃಹಲಕ್ಷ್ಮೀ ಯೋಜನೆ ಹಣವನ್ನು ಕಬಳಿಸಲಾಗುತ್ತಿದೆ. ನಿಮ್ಮ ಭಂಡತನದಿಂದ ನಿಮ್ಮ ಪಕ್ಷಕ್ಕೆ 30% ಕ್ಕೆ ಮತಪ್ರಮಾಣ ಕುಸಿದಿದೆ. ಮುಡಾ ಹಗರಣದ ಮೂಲಕ ಸಾವಿರಾರು ಕೋಟಿ ಹಣ ನುಂಗಿದ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಮೊನ್ನೆ ಬಂದವರು ಏನೂ ಸಾಧನೆ ಮಾಡದೇ ಬೊಗಳುವವರಿಂದ ನಾವು ಪಾಠ ಕಲಿಯಬೇಕಿಲ್ಲ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಬಳಿಕ ಸಾವಿರಾರು ರೈತರ ಆತ್ಮಹತ್ಯೆ, ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬಡವರ ಸರಣಿ ಆತ್ಮಹತ್ಯೆ ಮಾಡಿಕೊಂಡಿದ್ದು,
ತಾಕತ್ತಿದ್ರೆ ಎರಡು ವರ್ಷಗಳಲ್ಲಿ ನೀವು ಮಾಡಿದ ಅಭಿವೃದ್ಧಿ ಸಾಧನೆಗಳ ಪಟ್ಟಿ ಬಿಡುಗಡೆ ಮಾಡಿ ಎಂದು ಸವಾಲೆಸೆದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ,ಮೈಕ್ರೋಫೈನಾನ್ಸ್ ಸಾಲಗಾರರ ಕಾಟದಿಂದ ಜನ ಊರು ಬಿಟ್ಟು ವಲಸೆ ಹೋಗುತ್ತಿದ್ದಾರೆ, ಸರಣಿ ಆತ್ಮಹತ್ಯೆಗಳು ಆಗುತ್ತಿವೆ ಆದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ.
ಅಕ್ಕಿ ಬೇಕಾ ಬೇಡವೇ ಎಂದವರು ಒಂದು ಕೆಜಿ ಕೂಡ ಕೊಡುತ್ತಿಲ್ಲ,ಕೇಂದ್ರ ಸರ್ಕಾರ ಪ್ರತೀ ತಿಂಗಳು 22 ಲಕ್ಷ ಕ್ವಿಂಟಾಲ್ ಅಕ್ಕಿಯನ್ನು ರಾಜ್ಯದ ಬಡವರಿಗೆ ಕೊಡುತ್ತಿದ್ದು ,ಪೋಸ್ಟ್ ಮ್ಯಾನ್ ಕೆಲಸ ಮಾಡುವ ನೀವು ನಿಮ್ಮದೇ ಸಾಧನೆ ಎನ್ನುತ್ತೀರಿ ಎಂದು ವ್ಯಂಗ್ಯವಾಡಿದರು.ರಾಜ್ಯದ
10.50 ಲಕ್ಷ ಮಹಿಳೆಯರಿಗೆ ಇನ್ನೂ ಒಂದು ಕಂತೂ ಗೃಹಲಕ್ಷ್ಮೀ ಹಣ ಬಂದಿಲ್ಲ. ಪೊಲೀಸ್ ಶಕ್ತಿಯನ್ನು ಜನರ ಹಿತಕ್ಕೆ ಬಳಸಿಕೊಳ್ಳಬೇಕು,ಆದರೆ ಬಿಜೆಪಿ ಕಾರ್ಯಕರ್ತರ ದಮನಕ್ಕೆ ಬಳಸಿಕೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರ ಆಯುಷ್ಮಾನ್ ಕಾರ್ಡ್ ನೀಡುತ್ತಿದೆ.ಆದರೆ ಬಿಪಿಎಲ್ ಕಾರ್ಡ್ ರದ್ದತಿಯಿಂದ ಬಡವರು ಉಚಿತ ಆರೋಗ್ಯ ಸೇವೆಯಿಂದ ವಂಚಿತರಾಗುತ್ತಿದ್ದಾರೆ. ಜಲಜೀವನ್ ಮಿಷನ್ ಯೋಜನೆಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ 72 ಸಾವಿರ ಕೋಟಿ ಅನುದಾನ ನೀಡಿದೆ.ಆದರೆ ಈ ಯೋಜನೆ ಹಳ್ಳ ಹಿಡಿದಿದೆ, ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ 24 ಸಾವಿರ ಕೋಟಿ ಅನುದಾನ ದುರ್ಬಳಕೆ ಮಾಡಲಾಗಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಬೋಳ ಪ್ರಭಾಕರ ಕಾಮತ್, ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಮಟ್ಟಾರು ರತ್ನಾಕರ್ ಹೆಗ್ಡೆ,ಮಹಾವೀರ ಹೆಗ್ಡೆ, ಜಯರಾಮ ಸಾಲ್ಯಾನ್, ರೇಶ್ಮಾ ಉದಯ ಶೆಟ್ಟಿ, ರಶ್ಮಿ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್​​ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.

ಪ್ಲಾಸ್ಟಿಕ್‌ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್‌ ಬಾಟಲ್​ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ. 

ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್‌ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್​ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್‌ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *