ಕಾರ್ಕಳ : ತೆಂಗಿನ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಕುಕ್ಕುಂದೂರು ನಿವಾಸಿ ಶಂಕರ (50ವ) ಮೃತಪಟ್ಟವರು.
ಶಂಕರ ಅವರು ಜೂ.19ರಂದು ಕಾರ್ಕಳ ಕಸಬ ಗ್ರಾಮದ ಶ್ರೀದೇವಿ ಕಾಲೊನಿ ಬಳಿಯ ಲೋಹಿತ್ ಎಂಬವರ ಮನೆಯ ಬಳಿಯ ತೆಂಗಿನ ಮರದಿಂದ ಕಾಯಿ ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದಿಂದ ಕೆಳಕ್ಕೆ ಬಿದ್ದು ಸೊಂಟಕ್ಕೆ ಗಂಭೀರವಾಗಿ ಗಾಯಗೊಂಡಿದ್ದು. ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜೂ.20 ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶಂಕರ್ ಅವರು ಚಿಕಿತ್ಸೆ ಫಲಿಸದೆ ಇಂದು (ಶುಕ್ರವಾರ) ಬೆಳಿಗ್ಗೆ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











