ಉಡುಪಿ: ಹುಬ್ಬಳ್ಳಿಯಿಂದ ಮಂಗಳೂರಿಗೆ ಸಾಗುತ್ತಿದ್ದ ಪಿಕಪ್ ವಾಹನವು ಸೋಮವಾರ ಮುಂಜಾನೆ 4 ರ ಸುಮಾರಿಗೆ ರಾಷ್ಟಿçÃಯ ಹೆದ್ದಾರಿಯ ಉಡುಪಿ ಬಳಿಯ ಅಂಬಾಗಿಲು ಜಂಕ್ಷನ್ ಬಳಿ ಪಲ್ಟಿಯಾಗಿದ್ದು, ಈ ವಾಹನದಲ್ಲಿ ಎಮ್ಮೆಗಳನ್ನು ತುಂಬಿಸಿ ಹಿಂಭಾಗದಲ್ಲಿ ಟೊಮ್ಯಾಟೋ ತರಕಾರಿ ಕ್ರೇಟ್ ಗಳನ್ನು ಇರಿಸಲಾಗಿದೆ.
ಅತೀವೇಗವಾಗಿ ಬಂದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಡಿವೈಡರ್ ಗೆ ಬಡಿದು ಪಲ್ಟಿಯಾಗಿದೆ. ಈ ಅಪಘಾತದಿಂದ 5 ಎಮ್ಮೆಗಳ ಪೈಕಿ ಒಂದು ಗಬ್ಬದ ಎಮ್ಮೆ ಸಾವನ್ನಪ್ಪಿದ್ದು, ಎಮ್ಮೆಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲು ತರಕಾರಿ ವಾಹನದ ಸೋಗಿನಲ್ಲಿ ಹಿಂದೆ ಟೊಮ್ಯಾಟೋ ಹಣ್ಣುಗಳ ಬಾಕ್ಸ್ ಇರಿಸಿ ಅದರ ಹಿಂದಿನಿAದ 5 ಎಮ್ಮೆಗಳನ್ನು ಸಾಗಿಸಲಾಗುತ್ತಿತ್ತು. ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಭೇಟಿ ನೀಡಿ ಪಿಕಪ್ ವಾಹನ ಹಾಗೂ ಮೃತ ಎಮ್ಮೆಯನ್ನು ತೆರವುಗೊಳಿಸಿ ಉಳಿದ ಎಮ್ಮೆಗಳನ್ನು ರಕ್ಷಿಸಿದ್ದಾರೆ. ಈ ಅಪಘಾತದಿಂದ ಚಾಲಕ ಹಾಗೂ ಇನ್ನೋರ್ವ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.
ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.