Share this news

 

 

 

ಮಂಗಳೂರು: ನಗರದ ಬಜ್ಪೆಯ ಕಿನ್ನಿಪದವು ಬಳಿ ಗುರುವಾರ ಸಂಜೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಇತ್ತ ಸುಹಾಸ್ ಶೆಟ್ಟಿ ಹತ್ಯೆ ಆಗುತ್ತಿದ್ದಂತೆಯೇ ಆತನ ಫೋಟೋ ಹಾಕಿ ಫಿನಿಶ್ ಎಂದು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ವೈರಲ್ ಆಗಿದೆ.

ಮಾರ್ಚ್ 31ರಂದೇ ಸುಹಾಸ್ ಶೆಟ್ಟಿ ಹತ್ಯೆಗೆ ಮುಹೂರ್ತ ಫಿಕ್ಸ್ ಆಗಿತ್ತಾ ಎಂಬ ಅನುಮಾನಗಳು ಸದ್ಯ ಹುಟ್ಟಿಕೊಂಡಿದೆ,ಯಾಕೆಂದರೆ ಅಂದೇ ಟಾರ್ಗೆಟ್ ಕಿಲ್ಲರ್-03 ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಸುಹಾಸ್ ಶೆಟ್ಟಿ ಫೋಟೋ ಹಾಕಿ‌ ಶೀಘ್ರದಲ್ಲೇ ಸೇಡು ತೀರಿಸಿಕೊಳ್ಳುವುದಾಗಿ ಪ್ರಚೋದನಕಾರಿ ಪೋಸ್ಟ್ ಹಾಕಲಾಗಿತ್ತು.
ಇತ್ತ ಸುಹಾಸ್ ಹತ್ಯೆಯಾದ ಕೆಲವೇ ನಿಮಿಷಗಳಲ್ಲಿ Troll_mayadiaka ಹೆಸರಿನ ಇನ್‌ಸ್ಟಾಗ್ರಾಂ ಪೇಜ್ ನಲ್ಲಿ ‘ಫಿನೀಶ್’ ಅಂತ ಪೋಸ್ಟ್ ಬಹಿರಂಗವಾಗಿತ್ತು. ಮಂಗಳೂರಿನಿಂದಲೇ ಹಲವು ನಕಲಿ ಇನ್‌ಸ್ಟಾಗ್ರಾಂ ಪೇಜ್ ಗಳನ್ನು ನಿಯಂತ್ರಣ ಮಾಡಲಾಗುತ್ತಿದೆ. ಹತ್ಯೆ ಬೆನ್ನಲ್ಲೇ ವಿಡಿಯೋ ಹಂಚಿಕೊಳ್ಳುವ ಮೂಲಕ ಸಂಭ್ರಮಿಸಲಾಗಿದೆ. ಜೊತೆಗೆ ‘Waiting for next wicket’ ಅಂತ ಪೋಸ್ಟ್ ಮಾಡಲಾಗಿದೆ.
ಕೊಲೆಯಾದ ಸುಹಾಸ್‌ ಶೆಟ್ಟಿ ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯರಾಗಿದ್ದರು. ಸುಹಾಸ್ ಶೆಟ್ಟಿ ವಿರುದ್ಧ ಒಟ್ಟು 5 ಪ್ರಕರಣಗಳಿದ್ದವು. ಬಜಪೆ ಠಾಣೆಯಲ್ಲಿ 3, ಬೆಳ್ತಂಗಡಿ, ಸುರತ್ಕಲ್ ಠಾಣೆಯಲ್ಲಿ ತಲಾ 1 ಪ್ರಕರಣಗಳು ದಾಖಲಾಗಿದ್ದವು. ಒಂದು ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದು, ಇನ್ನೆರಡು ವಿಚಾರಣೆ ಹಂತದಲ್ಲಿದ್ದವು. ಮತ್ತು ಎರಡರಲ್ಲಿ ಖುಲಾಸೆಗೊಂಡಿದ್ದರು.

ಕೊಲೆ, ಕೊಲೆಗೆ ಯತ್ನ ಆರೋಪ ಹಿನ್ನಲೆ ಪೊಲೀಸರು ರೌಡಿಶೀಟ್ ಓಪನ್ ಮಾಡಿದ್ದರು. ಸುರತ್ಕಲ್ ನಲ್ಲಿ ನಡೆದಿದ್ದ ಫಾಜಿಲ್ ಕೊಲೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದರು. ಮಾರ್ಚ್ ನಲ್ಲಿ ಹೈಕೋರ್ಟ್ ನಿಂದ ಜಾಮೀನು ಪಡೆದು ಹೊರ ಬಂದಿದ್ದರು.

ಸಿನಿಮಾ ಸ್ಟೈಲ್ನಲ್ಲಿ ಸುಹಾಸ್ ಕೊಲೆ:

ಹಂತಕರು ನಿಖರ ಹಾಗೂ ಪಕ್ಕಾ ಪ್ಲ್ಯಾನ್ ಮಾಡಿಯೇ ಸುಹಾಸ್ ಶೆಟ್ಟಿಯ ಕತೆ ಮುಗಿಸಿದ್ದಾರೆ. ನಿನ್ನೆ ರಾತ್ರಿ 8.30ರ ಸುಮಾರು ಸುಹಾಸ್ ಶೆಟ್ಟಿ ತನ್ನ ಸ್ನೇ ಜೊತೆ ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಮೀನಿನ ಟೆಂಪೋ ಹಾಗೂ ಒಂದು ಸ್ವಿಫ್ಟ್ ಕಾರಿನ ಮೂಲಕ ಸುಹಾಸ್ ಕಾರನ್ನ ಚೇಸ್ ಮಾಡಿದ್ದಾರೆ. ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ, ಮೀನಿನ ಟೆಂಪೋವನ್ನು ಉದ್ದೇಶಪೂರ್ವಕವಾಗಿ ಸುಹಾಸ್ ಕಾರಿಗೆ ಡಿಕ್ಕಿಹೊಡೆದಿದ್ದಾರೆ.
ಡಿಕ್ಕಿ ಹೊಡೆದ ರಭಸಕ್ಕೆ ಸುಹಾಸ್ ಕಾರು ಸಲೂನ್‌ಗೆ ನುಗ್ಗಿದೆ. ಇದೇ ವೇಳೆ ಸ್ವಿಫ್ಟ್ ಕಾರಿನಲ್ಲಿದ್ದ ನಾಲ್ವರು ಹಂತಕರು ಮಾರಕಾಸ್ತ್ರಗಳನ್ನು ಹಿಡಿದು ಸುಹಾಸ್ ಶೆಟ್ಟಿಯನ್ನು ಹೊರಗೆಳೆದು ಸಾರ್ವಜನಿಕರ ಎದುರೇ ರಸ್ತೆಯಲ್ಲೇ ಕೊಚ್ಚಿಕೊಂದಿದ್ದಾರೆ. ಭೀಕರ ಹತ್ಯೆಯ ಲೈವ್ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ದುರಂತ ಎಂದರೆ ಜನರು ಈ ಕೊಲೆಯನ್ನು ಅಸಹಾಯಕತೆಯಿಂದ ಮೂಕಪ್ರೇಕ್ಷರಾಗಿ ನೋಡುತ್ತಾ ನಿಂತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

 

 

 

 

 

 

 

 

 

 

Leave a Reply

Your email address will not be published. Required fields are marked *