ಕಾರ್ಕಳ, ಆ 21: ಕಾರ್ಕಳ-ಬೆಳ್ಮಣ್-ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ರಾಜ್ಯ ಸರ್ಕಾರ ಟೋಲ್ ಸಂಗ್ರಹಕ್ಕೆ ಆದೇಶ ಮಾಡಿರುವುದನ್ನು ಕಾರ್ಕಳ ಭಾರತೀಯ ಜನತಾ ಪಾರ್ಟಿಯು ಪ್ರತಿ ಬಾರಿಯೂ ವಿರೋಧಿಸುತ್ತಾ, ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸುತ್ತಾ ಬಂದಿದೆ. ಟೋಲ್ ಸಂಗ್ರಹಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ಆಗಸ್ಟ್ 24 ಶನಿವಾರದಂದು ನಂದಳಿಕೆ ಸುಹಾಸ್ ಹೆಗ್ಡೆ ನೇತೃತ್ವದ ಸ್ಥಳೀಯ ಟೋಲ್ ಸಂಗ್ರಹ ವಿರೋಧಿ ಹೋರಾಟ ಸಮಿತಿಯ ಬೃಹತ್ ಸಾರ್ವಜನಿಕ ಪ್ರತಿಭಟನೆ ಗೆ ಕರೆ ನೀಡಲಾಗಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ.
ಅವರು ಬುಧವಾರ ಕಾರ್ಕಳ ಶಾಸಕರ ‘ವಿಕಾಸ’ ಜನಸೇವಾ ಕಛೇರಿಯಲ್ಲಿ ಎಲ್ಲಾ ಗ್ರಾಮಗಳ ಪ್ರಮುಖರೊಂದಿಗೆ ಸಭೆಯನ್ನು ನಡೆಸಿ, ಪ್ರತಿ ಗ್ರಾಮದಿಂದ ಒಂದು ಬಸ್ ಮೂಲಕ ಪ್ರತಿಭಟನೆಗೆ ಆಗಮಿಸಬೇಕು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು. ಈ ಮೂಲಕ ಈ ಪ್ರತಿಭಟನೆಯಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಕಳದಿಂದ ಎರಡು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್ತಿಳಿಸಿದ್ದಾರೆ.
ಈ ಸಭೆಯಲ್ಲಿ ಬಿಜೆಪಿ ಪ್ರಮುಖರಾದ ಮಹಾವೀರ ಹೆಗ್ಡೆ, ರೇಶ್ಮಾ ಉದಯ್ ಶೆಟ್ಟಿ, ಬೋಳ ಸತೀಶ್ ಪೂಜಾರಿಪ್ರವೀಣ್ ಸಾಲ್ಯಾನ್, ಜಯರಾಮ್ ಸಾಲ್ಯಾನ್, ದಯಾನಂದ ಹೆಗ್ಡೆ ಕಡ್ತಲ, ಹರ್ಷವರ್ಧನ್ ನಿಟ್ಟೆ, ದೇವೇಂದ್ರ ಶೆಟ್ಟಿ, ಸೂರ್ಯಕಾಂತ್ ಶೆಟ್ಟಿ, ಸರ್ವಜ್ಞ ತಂತ್ರಿ ಮುಂತಾದವರು ಉಪಸ್ಥಿತರಿದ್ದರು.
`