Share this news

 

 

ಕಾರ್ಕಳ,ಜ.28: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ರಿಕ್ಷಾ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ.

ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ದೂಪದಕಟ್ಟೆ ಎಂಬಲ್ಲಿ ಸೋಮವಾರ ಸಂಜೆ ಈ ಅಪಘಾತ ಸಂಭವಿಸಿದ್ದು, ಸ್ಟ್ಯಾನಿ ರೋಡ್ರಿಗಸ್ ಎಂಬವರು ಮೃತಪಟ್ಟಿದ್ದಾರೆ.
ರಿಕ್ಷಾ ಚಾಲಕ ಮನೋಜ್ ಕುಮಾರ್ ಎಂಬವರು ಸೋಮವಾರ ಸಂಜೆ ತನ್ನ ರಿಕ್ಷಾದಲ್ಲಿ ದೂಪದಕಟ್ಟೆಯಿಂದ ನಿಟ್ಟೆ ಕಡೆಗೆ ಹೋಗುತ್ತಿರುವ ವೇಳೆ ಶಾರದಾ ಹೊಟೇಲ್ ಬಳಿ ಸ್ಟ್ಯಾನಿ ರೋಡ್ರಿಗಸ್ ರಸ್ತೆ ದಾಟುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಈ ಅಪಘಾತದಿಂದ ಅವರ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿ ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಮುಂಜಾನೆ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *