
ಕಾರ್ಕಳ,ಡಿ.18: ತೋಟಗಾರಿಕೆ ಇಲಾಖೆ ಕಾರ್ಕಳ, ಮಾಳ-ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘ ಹಾಗೂ ಬಿಲ್ಲವ ಸಮಾಜ ಸೇವಾ ಸಂಘ ಬಜಗೋಳಿ ಸಹಯೋಗದಲ್ಲಿ ಅಡಿಕೆ ಬೆಳೆ ಎಲೆ ಚುಕ್ಕೆ ರೋಗ ಹಾಗೂ ಅಡಿಕೆ ಬೆಳೆ ಸಮಗ್ರ ನಿರ್ವಹಣೆ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವು ಡಿ. 22ರಂದು ಬಜಗೋಳಿ ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ.
ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟಿಸಲಿದ್ದು, ಮುಡಾರು ಪಂಚಾಯತ್ ಅಧ್ಯಕ್ಷೆ ಶ್ರುತಿ ಡಿ ಅತಿಕಾರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ವಿನಾಯಕ ಹೆಗಡೆ, ಸಸ್ಯರೋಗ ತಜ್ಞರು, ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ, ಕಾಸರಗೋಡು, ಡಾ.ಚೈತನ್ಯ, ತೋಟಗಾರಿಕೆ ತಜ್ಞರು,ವಲಯ ಕೃಷಿ ಹಾಗೂ ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ ರವರು, ಡಾ. ಸಂಜೀವ ಜಕಾತಿಮಠ, ಸಸ್ಯರೋಗ ತಜ್ಞರು, ವಲಯ ಕೃಷಿ ಹಾಗೂ ತೋಟಗಾರಿಕೆ ಸಂಶೋಧನಾ ಕೇಂದ್ರ, ಶೃಂಗೇರಿ ರವರು ಭಾಗವಹಿಸುತ್ತಿದ್ದು ರೈತರು ಕಾರ್ಯಕ್ರಮದ ಸದುಪಯೋಗ ಪಡೆಯಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಶ್ರೀನಿವಾಸ ಬಿ.ವಿ ತಿಳಿಸಿದ್ದಾರೆ.
.
.
