ಬೆಂಗಳೂರು:ಲೋಕಸಭಾ ಚುನಾವಣೆಯ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ ನಂಜುಂಡಿ ರಾಜೀನಾಮೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆ ನಿರ್ಧಾರವನ್ನು ಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಕೈಗೊಂಡಿದ್ದಾರೆ. ಇದೇ ಕಾರಣಕ್ಕಾಗಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ ನಂಜುಂಡಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾದ ಅವರು, ತಮ್ಮ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇತ್ತ ಬಿಜೆಪಿ ತೊರೆದ ಕೆ.ಪಿ ನಂಜುಂಡಿ,ಇಂದು ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರಲಿದ್ದಾರೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ಮಾತುಕತೆ ನಡೆಸಿ, ಅಂತಿಮಗೊಳಿಸಿರುವುದಾಗಿ ಹೇಳಿದ್ದಾರೆ