Share this news

 

 

 

ಕಾರ್ಕಳ :ಕಾರ್ಕಳದ ನಿಟ್ಟೆ ಗ್ರಾಮದ ದೂಪದಕಟ್ಟೆ ರಾಜ್ಯ ಹೆದ್ದಾರಿಯ ಸಮೀಪ ಉದ್ಯಮಿ ದಿಲೀಪ್ ಎನ್.ಆರ್. ಎಂಬವರು ತನ್ನ ಕಾರಿನಲ್ಲೇ ಮಂಗಳವಾರ ನಸುಕಿನ ಜಾವ ತನ್ನ ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

ಮAಗಳೂರಿನಲ್ಲಿ ಉದ್ಯಮ ನಡೆಸುತ್ತಿರುವ ದಿಲೀಪ್ ಎನ್.ಆರ್ ಮೂಲತಃ ಕಾರ್ಕಳದ ನಿವಾಸಿ. ತನ್ನ ಉದ್ಯಮದಲ್ಲಿ ಭಾರೀ ನಷ್ಟವಾದ ಹಿನ್ನೆಲೆಯಲ್ಲಿ ಆರ್ಥಿಕ ಮುಗ್ಗಟ್ಟು ಹಾಗೂ ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿಲೀಪ್ ಅವರಿಗೆ ಉದ್ಯಮದಲ್ಲಿ ನಷ್ಟವಾಗಿದ್ದು, ಕಿಡ್ನಿಯ ಸಮಸ್ಯೆಯಿಂದ ಬಳಲುತ್ತಿದ್ದರು. ತಾನು ಸ್ವಯಂಪ್ರೇರಿತನಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಹೋಗುತ್ತಿದ್ದೇನೆಂದು ಸೋಮವಾರ ರಾತ್ರಿ ತನ್ನ ಮನೆಯವರಿಗೆ ವಾಟ್ಸಾಪ್ ಮೆಸೇಜ್ ಮಾಡಿದ್ದರು. ಈ ಕುರಿತು ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದಾಗ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಅವರನ್ನು ಹುಡುಕಲು ಆರಂಭಿಸಿದ್ದರು. ಈ ವೇಳೆ ಇಂದು ಮುಂಜಾನೆ 3.30 ರ ಸುಮಾರಿಗೆ ನಿಟ್ಟೆ ಗ್ರಾಮದ ದೂಪದಕಟ್ಟೆ ರಾಜ್ಯ ಹೆದ್ದಾರಿಯ ಸಮೀಪ ಕಾರಿನಲ್ಲಿ ದಿಲೀಪ್ ಮೃತದೇಹ ಪತ್ತೆಯಾಗಿದೆ. ಕಾರಿನಲ್ಲಿ ವಿಷದ ಬಾಟಲಿ ಕಂಡುಬAದಿದ್ದು ಅವರು ವಿಷ ಸೇವಿಸಿ ಬಳಿಕ ತನ್ನ ರಿವಾಲ್ವರ್‌ನಿಂದ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಡುಪಿ ಜಿಲ್ಲಾ ಎಸ್ಪಿ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.

ದಿಲೀಪ್ ಅವರು ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಸುಭೀತ್ ಎನ್.ಆರ್ ಇವರ ಸಹೋದರ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆಯವರ ಅವರ ನಿಕಟ ಸಂಬAಧಿಯೂ ಆಗಿದ್ದಾರೆ.
ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರ ಸಹೋದರ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

 

 

 

 

 

 

 

 

 

 

Leave a Reply

Your email address will not be published. Required fields are marked *