ಕಾರ್ಕಳ: ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘ ಅಜೆಕಾರು ಇದರ ವತಿಯಿಂದ ಶಾಸಕ ವಿ. ಸುನಿಲ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶಾಂತಿರಾಜ್ ಜೈನ್ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮತಾ ಶೆಟ್ಟಿ ಹಾಗೂ ಸಂಘದ ನಿರ್ದೇಶಕರು ಮತ್ತು ಸಿಬ್ಬಂದಿಗಳು ಊರ ಹಿರಿಯರು ಉಪಸ್ಥಿತಿ ಇದ್ದರು. ಈ ವೇಳೆ ಶಾಸಕ ಸುನಿಲ್ ಕುಮಾರ್ ಅವರು ಸಂಘದ ಅಭಿವೃದ್ಧಿಯ ಬಗ್ಗೆ ಚರ್ಚಿಸಿ ಸಲಹೆ ಮತ್ತು ಸೂಕ್ತ ಮಾರ್ಗದರ್ಶನ ನೀಡಿದರು.
`