Share this news

ಹೆಬ್ರಿ: ಜೆಸಿಬಿ ವಾಹನಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಶಿವಪುರದಲ್ಲಿ ಸಂಭವಿಸಿದೆ.
ಶಿವಪುರ ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಎಂಬವರು ಮೃತ ಪಟ್ಟ ಯುವಕ.
ಶುಕ್ರವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದ್ದು, ತನ್ನ ಸಹೋದರನನ್ನು ಬೈಕಿನಲ್ಲಿ ಶಾಲೆಗೆ ಡ್ರಾಪ್ ಕೊಡಲು ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಪ್ರತ್ಯಕ್ಷ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಪ್ರೀತಿಶ್ ಕೂಡ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಶಿವಪುರ ಪರಿಸರದಲ್ಲಿ ಮುನ್ನ ಎಂದೇ ಕರೆಯಲ್ಪಡುತ್ತಿದ್ದ ಪ್ರತ್ಯಕ್ಷ ಶಿವಪುರ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                        

                          

                        

                          

 

Leave a Reply

Your email address will not be published. Required fields are marked *