
ಕೊಪ್ಪಳ, ಮಾ.04: ಅಮೆರಿಕ ಮತ್ತು ಇಸ್ರೇಲ್ ಕ್ಷಿಪಣಿ ದಾಳಿಗೆ ಇರಾನ್ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಈ ಹತ್ಯೆ ಖಂಡಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಈ ಮಧ್ಯೆ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತಾಗಿ ಇನ್ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ ಯುವಕನಿಗೆ ಮುಸ್ಲಿಂ ಯುವಕರ ತಂಡ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಘಟನೆ ನಡೆದಿದ್ದು,
ಚಂದ್ರಶೇಖರ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಚಂದ್ರಶೇಖರ ಖರ್ಜೂರ ವ್ಯಾಪಾರಿಯಾಗಿದ್ದು, ವ್ಯಾಪಾರ ಮಾಡುತ್ತಿದ್ದ ವೇಳೆ ಏಕಾಏಕಿ ಬಂದ ಮುಸ್ಲಿಂ ಯುವಕರು ಹಲ್ಲೆ ಮಾಡಿದ್ದಾರೆ. ನಮ್ಮ ಸಮಾಜದ ಬಗ್ಗೆ ಏಕೆ ಸ್ಟೋರಿ ಹಾಕಿದೆ. ನಮಗೆ ನೋವಾಗಿದೆ ಎಂದು ಬೈದು ಹಲ್ಲೆ ಮಾಡಿದ್ದಾರೆ.
ಅಷ್ಟೇ ಅಲ್ಲದೆ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಬೆದರಿಕೆ ಕೂಡ ಹಾಕಿದ್ದಾರೆ ಎನ್ನಲಾಗಿದೆ. ಮುಸ್ಲಿಂ ಯುವಕರಿಂದ ತನಗೆ ಜೀವ ಭಯವಿದೆ ಎಂದು ಚಂದ್ರಶೇಖರ ತಡರಾತ್ರಿ ಗಂಗಾವತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


.
.
.
.
.
.
.
.
.
.
