ಬೆಂಗಳೂರು : ಬೆಂಗಳೂರು ನಿವಾಸದಲ್ಲಿ ಬಹು ಭಾಷಾ ಹಿರಿಯ ನಟಿ ಬಿ. ಸರೋಜಾದೇವಿ (87) ಇಂದು ನಿಧನರಾಗಿದ್ದಾರೆ. ಕನ್ನಡ ತಮಿಳು ತೆಲುಗು ಹಿಂದಿ ಚಿತ್ರಗಳಲ್ಲಿ ಬಿ ಸರೋಜಾದೇವಿ ಅನೇಕ ಚಿತ್ರಗಳಲ್ಲಿ ನಟಿಸಿದ್ದರು.2019ರಲ್ಲಿ ರಿಲೀಸ್ ಆದ ಪುನೀತ್ ರಾಜ್ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರ.
ಸರೋಜಾ ಅವರು 1967ರಲ್ಲಿ ಹರ್ಷ ಅವರನ್ನು ವಿವಾಹ ಆದರು. 1986ರಲ್ಲಿ ಪತಿ ನಿಧನ ಹೊಂದಿದರು. ಈಗ ಪತಿ ಹರ್ಷ ಸಮಾಧಿ ಪಕ್ಕದಲ್ಲೇ ಸರೋಜಾ ಅವರ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.
ಸರೋಜಾ ದೇವಿ ಜನಿಸಿದ್ದು 1938ರ ಜನವರಿ 7ರಂದು. ಅವರು ಬೆಂಗಳೂರಿನಲ್ಲಿ ಹುಟ್ಟಿದರು. ಅವರ ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ ಅವರು ಹೌಸ್ವೈಫ್ ಆಗಿದ್ದರು. 1955ರಲ್ಲಿ ಬಂದ ‘ಮಹಾಕವಿ ಕಾಳಿದಾಸ’ ಚಿತ್ರದ ಮೂಲಕ ಸರೋಜಾ ದೇವಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು. ಆಗ ಅವರಿಗೆ 17 ವರ್ಷ. ಆ ಬಳಿಕ ಆಫರ್ಗಳು ಅವರನ್ನು ಹುಡುಕಿ ಬಂದವು. ಕೇವಲ ಕನ್ನಡ ಮಾತ್ರವಲ್ಲದೆ, ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲೋ ಸರೋಜಾ ದೇವಿ ಅವರು ನಟಿಸಿದ್ದಾರೆ. ಅವರ ವೃತ್ತಿ ಬದುಕಿನಲ್ಲಿ ಸುಮಾರು 200ಕ್ಕೂ ಅಧಿಕ ಚಿತ್ರಗಳಲ್ಲಿ ಕಾಣಿಸಿಕೊಂಡರು.