ದಾವಣಗೆರೆ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೊಬ್ಬ ಸಾವಿಗೀಡಾಗಿದ್ದು, ಇದರಿಂದ ರೊಚ್ಚಿಗೆದ್ದ ಆರೋಪಿ ಪರ ನೂರಾರು ಜನರು ಠಾಣೆ ಮೇಲೆ ಏಕಾಎಕಿ ದಾಳಿ ಮಾಡಿ,ಪೊಲೀಸರ ಮೇಲೆ ಹಲ್ಲೆ ನಡೆಸಿ,ಠಾಣೆಯಲ್ಲಿನ ವಸ್ತುಗಳನ್ನು ಪುಡಿಗಟ್ಟಿ, ಪೊಲೀಸ್ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ಈ ದಾಳಿಯಲ್ಲಿ ಹಲವು ಮಂದಿ ಪೊಲೀಸರಿಗೆ ಗಾಯಗಳಾಗಿವೆ.
ಮಟ್ಕಾ ಆಡಿಸುತ್ತಿದ್ದಾನೆ ಎನ್ನುವ ಆರೋಪದ ಹಿನ್ನಲೆ ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ಸಂಜೆ ಪೊಲೀಸ್ ಠಾಣೆಗೆ ಕರೆತಂದಿದ್ದರು. ಇದ್ದಕ್ಕಿದ್ದಂತೆ ರಕ್ತದೊತ್ತಡ ಕಡಿಮೆಯಾಗಿದ್ದ ಅದಿಲ್‌ನನ್ನು ಅಸ್ಪತ್ರೆಗೆ ಸಾಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ಸಾವನ್ನಪ್ಪಿದ್ದಾನೆ. ಆದರೆ, ಇದೀಗ ಅದಿಲ್ ಸಾವಿಗೆ ಪೊಲೀಸರೇ ಕಾರಣ ಎಂದು ಸಂಬಂಧಿಕರು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ ಅದಿಲ್ ಸಂಬಂಧಿಕರು ಹಾಗೂ ಸ್ನೇಹಿತರು, ಪೊಲೀಸ್ ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯ ಆವರಣದಲ್ಲಿ ಸಮುದಾಯದ ನೂರಾರು ಜನರು ಜಮಾಯಿಸಿ, ಹಠಾತ್ ದಾಳಿ ನಡೆಸಿದ್ದಾರೆ
ಈ ನಡುವೆ ಚನ್ನಗಿರಿ ಡಿವೈಎಸ್ಪಿ ಪ್ರಶಾಂತ್ ಅವರು ಮೃತ ಆದಿಲ್ ಸಂಬಂಧಿಕರನ್ನು ಮನವೊಲಿಸಲು ಯತ್ನಿಸಿದರೂ ಕೂಡ ಯಾವುದೇ ಪ್ರಯೋಜನವಾಗಲಿಲ್ಲ. ಸದ್ಯ ಠಾಣೆ ಎದುರು ಬಿಗುವಿವ ವಾತಾವರಣ ನಿರ್ಮಾಣವಾಗಿದೆ