Share this news

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೋರ್ಟ್‌ನ 5ನೇ ಮಹಡಿಯಿಂದ ಹಾರಿ ಆರೋಪಿ ಗೌತಮ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಚಾರಣೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ಆರೋಪಿಯನ್ನು ಕೋರ್ಟ್ ಗೆ ಕರೆತರಲಾಗಿತ್ತು. ಈ ವೇಳೆ ಕೋರ್ಟಿನ ಮಹಡಿಯಿಂದ ಆರೋಪಿ ಜಿಗಿದಿದ್ದಾನೆ. ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಮೃತಪಟ್ಟಿದ್ದಾನೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪೋಕ್ಸೊ ಕೇಸಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು. ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಕೋರ್ಟ್‌ಗೆ ಕರೆತಂದಾಗ ಕುಟುಂಬದವರು ಕೂಡ ಉಪಸ್ಥಿತರಿದ್ದರು. ಅವಮಾನ ತಾಳಲಾರದೇ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *