Share this news

ಮಂಗಳೂರು: ಕಾಸರಗೋಡಿನ ಅರ್ಚಕರೊಬ್ಬರನ್ನು ಫೇಸ್‌ಬುಕ್‌ ಮೂಲಕ ಫ್ರೆಂಡ್‌ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಫೋಟೋ, ವೀಡಿಯೋ ಶೇರ್‌ ಮಾಡಿ ಅದನ್ನೇ ಮುಂದಿಟ್ಟು ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಲ್ಲಿ ಯಕ್ಷಗಾನ ಕಲಾವಿದನೊಬ್ಬನನ್ನು ಬದಿಯಡ್ಕ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಕೊಳಂಬೆ ನಿವಾಸಿ ಅಶ್ವಥ್‌ ಆಚಾರ್ಯ (33) ಎಂದು ಗುರುತಿಸಲಾಗಿದೆ.
ಫೇಸ್‌ಬುಕ್‌ನಲ್ಲಿ ಅರ್ಚಕರ ಜತೆ ಪರಿಚಯ ಬೆಳೆಸಿ ಫ್ರೆಂಡ್‌ ಆಗಿದ್ದ ಅಶ್ವಥ್‌, ಅನಂತರ ಆನ್‌ಲೈನ್‌ನಲ್ಲಿ ನಿರಂತರ ಸಂಪರ್ಕದಲ್ಲಿದ್ದ. ಇದೇ ವೇಳೆ ಒಬ್ಬರಿಗೊಬ್ಬರು ಅಶ್ಲೀಲ ಚಾಟಿಂಗ್‌, ಫೋಟೋ, ವೀಡಿಯೋ ಶೇರ್‌ ಮೊದಲಾದವುಗಳನ್ನು ಮಾಡಿಕೊಂಡಿದ್ದು, ಇದನ್ನೇ ಮುಂದಿಟ್ಟು ಅರ್ಚಕನನ್ನು ಅಶ್ವಥ್‌ ಆಚಾರ್ಯ ಬ್ಲ್ಯಾಕ್‌ಮೇಲ್ ಮಾಡಿದ್ದ.
ತಾನು ಯುವತಿಯಾಗಿ ಲಿಂಗ ಬದಲಾಯಿಸಿಕೊಳ್ಳುತ್ತೇನೆ, ಅದಕ್ಕಾಗಿ ಹಣದ ಅಗತ್ಯವಿದೆ ಎಂದೂ ನಂಬಿಸಿದ್ದ. ಅರ್ಚಕ ಕಳೆದ ನಾಲ್ಕು ತಿಂಗಳಲ್ಲಿ 10.5 ಲಕ್ಷ ರೂ. ಮೊತ್ತವನ್ನು ಆರೋಪಿಯ ಖಾತೆಗೆ ವರ್ಗಾಯಿಸಿದ್ದರು. ಮತ್ತಷ್ಟು ಹಣ ನೀಡದಿದ್ದರೆ ವೀಡಿಯೋ, ಫೋಟೊ ಜಾಲತಾಣದಲ್ಲಿ ಹಾಕುತ್ತೇನೆ ಎಂದು ಬೆದರಿಸಿದ್ದ.
ಇದರಿಂದ ಬೇಸತ್ತ ಅರ್ಚಕರು ಫೆ. 5ರಂದು ಬದಿಯಡ್ಕ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾಸರಗೋಡು ಡಿವೈಎಸ್ಪಿ ಸುನಿಲ್‌ ಕುಮಾರ್‌ ನೇತೃತ್ವದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಈ ರೀತಿ ಬೇರೆ ವ್ಯಕ್ತಿಗಳನ್ನೂ ಬ್ಲ್ಯಾಕ್‌ಮೇಲ್ ಮಾಡಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್​​ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.

ಪ್ಲಾಸ್ಟಿಕ್‌ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್‌ ಬಾಟಲ್​ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ. 

ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್‌ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್​ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್‌ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *