ಹಾಸನ : ಮಹಿಳೆಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡಗೆ ಇದೀಗ ಹೊಳೆನರಸೀಪುರ ಜೆಎಂಎಫ್’ಸಿ ಕೋರ್ಟ್ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಮೇ 14 ರಂದು ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದು 16ರವರೆಗೆ ಅತ್ಯಾಚಾರ ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ.
ವಕೀಲ ದೇವರಾಜೇಗೌಡ ಮಹಿಳೆಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ವಿಚಾರಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಅರ್ಜಿಯ ವಿಚಾರಣೆ ನಡೆಸಿದ ಹೊಳೆನರಸೀಪುರ ಜೆಎಂಎಫ್ ಸಿ ಕೋರ್ಟ್ ನ್ಯಾಯಾಧೀಶ ಪ್ರವೀಣ್, ದೇವರಾಜ ಗೌಡಗೆ ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ತಮ್ಮ ಬಂಧನದ ಸುಳಿವು ಸಿಗುತ್ತಿದ್ದಂತೆ ಪರಾರಿಯಾಗಲು ದೇವರಾಜೇಗೌಡ ಯತ್ನಿಸಿದ್ದು, ಅವರ ಮೊಬೈಲ್ ಲೊಕೇಶನ್ ಆಧರಿಸಿ ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಸಮೀಪ ಅವರನ್ನು ಬಂಧಿಸಲಾಗಿತ್ತು.





