ಬೆಂಗಳೂರು: ತೀವೃ ಚರ್ಚೆಗೆ ಗ್ರಾಸವಾಗಿದ್ದ ಒಂದನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಪೋಷಕರ ಒತ್ತಾಯಕ್ಕೆ ಅಸ್ತು ಎಂದಿದೆ. ಈ ಬಾರಿಯ ಶೈಕ್ಷಣಿಕ ವರ್ಷಕ್ಕೆ ಮಿತಿಗೊಳಿಸಿ ರಾಜ್ಯದಲ್ಲಿ 1ನೇ ತರಗತಿಗೆ ಮಕ್ಕಳ ದಾಖಲಾತಿಗೆ ವಯೋಮಿತಿ ಸಡಿಲಿಕೆ ಮಾಡಲಾಗಿದ್ದು 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿ ಮಾಡಬಹುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು 1ನೇ ತರಗತಿಗೆ ಮಕ್ಕಳನ್ನು ಸೇರಿಸುವ ವಯೋಮಿತಿಯನ್ನು ಸಡಿಲಿಕೆ ಮಾಡಲಾಗಿದೆ.ದೇಶಾಧ್ಯಂತ 1ನೇ ತರಗತಿಗೆ ಮಕ್ಕಳ ದಾಖಲಾತಿಗೆ 6 ವರ್ಷ ಕಡ್ಡಾಯವಿದೆ. ಆದರೇ ಈ ವರ್ಷ ಮಾತ್ರ ಕರ್ನಾಟಕದಲ್ಲಿ ವಯಸ್ಸಿನ ಮಿತಿಯನ್ನು ಸಡಿಲಿಕೆ ಮಾಡಲಾಗುತ್ತಿದೆ. ಈ ವರ್ಷ ಮಾತ್ರ 5 ವರ್ಷ 5 ತಿಂಗಳು ತುಂಬಿರುವ ಮಕ್ಕಳನ್ನು 1ನೇ ತರಗತಿಗೆ ದಾಖಲಾತಿ ಮಾಡಬಹುದು ಎಂಬುದಾಗಿ ತಿಳಿಸಿದರು.ಆದರೆ ಮುಂದಿನ ವರ್ಷದಿಂದ 1ನೇ ತರಗತಿಗೆ ದಾಖಲಾತಿಯಲ್ಲಿ ಯಾವುದೇ ಬದಲಾವಣೆಯಿಲ್ಲ. ದೇಶದಲ್ಲಿ ಇರುವಂತೆಯೇ 1ನೇ ತರಗತಿಗೆ ಶಾಲಾ ಮಕ್ಕಳ ದಾಖಲಾತಿಗೆ 6 ವರ್ಷ ಕಡ್ಡಾಯವೆಂಬ ನಿಯಮ ಜಾರಿಯಲ್ಲಿ ಇರಲಿದೆ ಎಂದರು.
ಕರ್ನಾಟಕದಲ್ಲಿ 1ನೇ ತರಗತಿಗೆ ಮಕ್ಕಳ ದಾಖಲಾತಿಯ ವಯಸ್ಸಿನ ಮಿತಿಯ ಸಂಬAಧ ಎನ್ ಇ ಪಿ ಅವರಿಂದ ವರದಿ ಕೇಳಲಾಗಿತ್ತು, ಅಲ್ಲದೇ ಇಲಾಖೆಯವರೊಂದಿಗೂ ಮಾತನಾಡಲಾಗಿತ್ತು. ಎನ್ ಇ ಪಿ ಸೂಚನೆ ಮೇರೆಗೆ ಈ ವರ್ಷ ಮಾತ್ರ 1ನೇ ತರಗತಿ ದಾಖಲಾತಿಗೆ 5 ವರ್ಷ 5 ತಿಂಗಳ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ ಎಂಬುದಾಗಿ ತಿಳಿಸಿದರು.