Share this news

ಅಹಮದಾಬಾದ್: ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಗುರುವಾರ ಮಧ್ಯಾಹ್ನ ಪತನಗೊಂಡ ಅಹಮದಾಬಾದ್‌ನ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು. ಅಹಮದಾಬಾದ್‌ ಸಿವಿಲ್ ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ದುರಂತದಲ್ಲಿ ಬದುಕುಳಿದಿದ್ದ ಏಕೈಕ ಪ್ರಯಾಣಿಕ ಕುಮಾರ್ ವಿಶ್ವಾಸ್ ಅವರ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಹಾರೈಸಿದರು.

ಈ ವೇಳೆ ಪ್ರಧಾನಿ ಮೋದಿ ಅವರಿಗೆ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್‌ ಮೋಹನ್‌ ನಾಯ್ಡು ಸಾಥ್‌ ನೀಡಿದರು. ಅಪಘಾತ ನಡೆದ ಸ್ಥಳ ಮತ್ತು ಅಪಘಾತದಿಂದ ಹಾನಿಗೊಳಗಾದ ಹಾಸ್ಟೇಲ್‌ ಪ್ರದೇಶವನ್ನು ಪ್ರಧಾನಿ ಮೋದಿ ಪರಿಶೀಲಿಸಿದರು. ಈ ವೇಳೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಹಮದಾಬಾದ್‌ನಲ್ಲಿ ಅಪಘಾತ ಸ್ಥಳಕ್ಕೆ ಇಂದು ಭೇಟಿ ನೀಡಿದ್ದೇನೆ. ವಿನಾಶದ ದೃಶ್ಯವು ಹೃದಯವಿದ್ರಾವಕವಾಗಿದೆ. ದಣಿವರಿಯದೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಅಧಿಕಾರಿಗಳು ಮತ್ತು ತಂಡಗಳನ್ನು ಭೇಟಿ ಮಾಡಿದೆ. ಈ ಊಹಿಸಲಾಗದ ದುರಂತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನಾವಿದ್ದೇವೆ ಎಂದು ಮೋದಿ ಎಕ್ಸ್​ ಸಂದೇಶದಲ್ಲಿ ತಿಳಿಸಿದ್ದಾರೆ.

ಅಹಮದಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ವಿಮಾನ ಗುರುವಾರ ಮಧ್ಯಾಹ್ನ ಪತನಗೊಂಡಿತ್ತು. ಈ ಭೀಕರ ಅಪಘಾತದಲ್ಲಿ 265 ಜನರು ಮೃತಪಟ್ಟಿದ್ದರು.

 

 

 

 

Leave a Reply

Your email address will not be published. Required fields are marked *